ಪಾಕ್ನಿಂದ 59 ಭಾರತೀಯ ಮೀನುಗಾರರ ಬಿಡುಗಡೆ
ಪಾಕಿಸ್ತಾನದ ಕರಾವಳಿಯಲ್ಲಿ ಬಂಧನಕ್ಕೊಳಗಾಗಿದ್ದ 59 ಭಾರತೀಯ ಮೀನುಗಾರರನ್ನು ಅಲ್ಲಿನ ಸರ್ಕಾರ ಭಾನುವಾರ ಬಿಡುಗಡೆ ಮಾಡಿದೆ.
ಇಸ್ಲಾಮಾಬಾದ್: ಪಾಕಿಸ್ತಾನದ ಕರಾವಳಿಯಲ್ಲಿ ಬಂಧನಕ್ಕೊಳಗಾಗಿದ್ದ 59 ಭಾರತೀಯ ಮೀನುಗಾರರನ್ನು ಅಲ್ಲಿನ ಸರ್ಕಾರ ಭಾನುವಾರ ಬಿಡುಗಡೆ ಮಾಡಿದೆ.
ನಾಳೆ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕರಿಸಲಿರುವ ಹಿನ್ನಲೆಯಲ್ಲಿ ಸಮಾರಂಭಕ್ಕೆ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರು ಆಗಮಿಸುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ಪಾಕಿಸ್ತಾನ ಸರ್ಕಾರ 59 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದೆ.
ಪಾಕಿಸ್ತಾನ ಕರಾವಳಿ ತೀರದಲ್ಲಿ ಅಕ್ರಮವಾಗಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ಇವರನ್ನು ಬಂಧಿಸಲಾಗಿತ್ತು. ಇದೀಗ ಉಭಯ ದೇಶಗಳ ಬಾಂಧವ್ಯ ವೃದ್ಧಿ ದೃಷ್ಟಿಯಿಂದ ಮೀನುಗಾರರನ್ನು ಬಿಡುಗಡೆ ಮಾಡುತ್ತಿರುವುದಾಗಿ ಪಾಕಿಸ್ತಾನ ಹೇಳಿದೆ.