ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮೋದಿ ಪಟ್ಟಾಭಿಷೇಕಕ್ಕೆ 'ಅಮ್ಮಾ' ಬಹಿಷ್ಕಾರ

ನಿಯೋಜಿ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಬಹಿಷ್ಕಾರ ಹೇರಿದ್ದಾರೆ.

Srinivasa Murthy VN
Updated On : 25 May 2014, 11:51 am

ಚೆನ್ನೈ: ನಿಯೋಜಿ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಬಹಿಷ್ಕಾರ ಹೇರಿದ್ದಾರೆ.

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಶ್ರೀಲಂಕಾ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಅವರಿಗೆ ಆಹ್ವಾನಿ ನೀಡಿರುವುದರಿಂದ ಅಸಮಾಧಾನಗೊಂಡಿರುವ ತಮಿಳುನಾಡ ಸರ್ಕಾರ ಮತ್ತು ಅಲ್ಲಿನ ರಾಜಕೀಯ ಪಕ್ಷಗಳು ಸಮಾರಂಭವನ್ನು ಬಹಿಷ್ಕರಿಸಿದೆ. ಸ್ವತಃ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಕೂಡ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಬಹಿಷ್ಕರಿಸಿದ್ದಾರೆ.

ನಿನ್ನೆಯಷ್ಟೇ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದ ಎನ್‌ಡಿಎ ಮೈತ್ರಿಕೂಟದ ಅಂಗ ಪಕ್ಷವಾಗಿರುವ ಎಂಡಿಎಂಕೆ ಮುಖ್ಯಸ್ಥ ವೈಕೋ ಅವರು, ಶ್ರೀಲಂಕಾ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಅವರಿಗೆ ಆಹ್ವಾನ ನೀಡಿರುವ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೆ ಆಹ್ವಾನವನ್ನು ಹಿಂಪಡೆಯುವಂತೆ ಕೋರಿದ್ದರು.

ನವದೆಹಲಿಯಲ್ಲಿರುವ ರಾಷ್ಟ್ರಪತಿ ಭವನದಲ್ಲಿ ನಾಳೆ ಸಂಜೆ 6ಗಂಟೆಗೆ ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ನರೇಂದ್ರ ಮೋದಿ ಅವರಿಗೆ ಪ್ರತಿಜ್ಞಾವಿಧಿ ಭೋಧಿಸಲಿದ್ದಾರೆ. ಕಾರ್ಯಕ್ರಮದಲ್ಲಿ ದೇಶದ ಸುಮಾರು 2,500ಕ್ಕೂ ಅಧಿಕ ಗಣ್ಯರು ಮತ್ತು ವಿವಿಧ ದೇಶಗ ಪ್ರಧಾನಿಗಳು ಮತ್ತು ಸಾರ್ಕ್ ಸಮಿತಿಯ ಸದಸ್ಯರು ಪಾಲ್ಗೊಳ್ಳಲ್ಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement