ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ ಸಂಸದ ಯಡಿಯೂರಪ್ಪ

Vishwanath S
Updated On : 25 May 2014, 4:12 am

ಶಿವಮೊಗ್ಗ: ಶಿವಮೊಗ್ಗ ಕ್ಷೇತ್ರದ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಶಾಸಕ ಸ್ಥಾನಕ್ಕೆ ಭಾನುವಾರ ರಾಜಿನಾಮೆ ನೀಡಿದ್ದಾರೆ.

2013ರ ವಿಧಾನಸಭೆ ಚುನಾವಣೆಯಲ್ಲಿ ಶಿಕಾರಿಪುರ ಕ್ಷೇತ್ರದಿಂದ ಯಡಿಯೂರಪ್ಪ ಅವರು ಶಾಸಕರಾಗಿ ಆಯ್ಕೆಗೊಂಡಿದ್ದರು. ಇದೀಗ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಗೆದ್ದು ಬಂದಿದ್ದು, ಈ ಹಿನ್ನಲೆಯಲ್ಲಿ ಯಡಿಯೂರಪ್ಪ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ವಿಧಾನಸಭೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಯಡಿಯೂರಪ್ಪ ಅವರು ತಮ್ಮ ರಾಜಿನಾಮೆ ಪತ್ರವನ್ನು ಇಂದು ಕಳುಹಿಸಿದ್ದು, ಮೇ 30ರಿಂದ ಅನ್ವಯವಾಗುವಂತೆ ತಮ್ಮ ರಾಜಿನಾಮೆಯನ್ನು ಅಂಗೀಕರಿಸುವಂತೆ ಸ್ಪೀಕರ್‌ಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

2013ರ ವಿಧಾನಸಭೆ ಚುನಾವಣೆಯಲ್ಲಿ ಶಿಕಾರಿಪುರದಿಂದ ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಿ.ಎಸ್. ಯಡಿಯೂರಪ್ಪ, ಸುಮಾರು 20 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದರು. ಯಡ್ಡಿ ರಾಜಿನಾಮೆಯಿಂದ ತೆರವುಗೊಂಡಿರುವ ಶಿಕಾರಿಪುರ ವಿಧಾನಸಭೆಗೆ ಆರು ತಿಂಗಳಿನಲ್ಲಿ ಉಪ ಚುನಾವಣೆ ನಡೆಯಲಿದ್ದು, ಇದರಲ್ಲಿ ಯಡಿಯೂರಪ್ಪ ಪುತ್ರ ಬಿ.ವೈ. ರಾಘವೇಂದ್ರ ಸ್ಪರ್ಧಿಸುವ ಸಾಧ್ಯತೆಗಳಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement