ಮಿಗ್-21 ವಿಮಾನ ಅಪಘಾತ: ಪೈಲಟ್ ಸಾವು
ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಾಯೋಗಿಕ ಹಾರಾಟ ನಡೆಸುತ್ತಿದ್ದ ಲಘು...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಾಯೋಗಿಕ ಹಾರಾಟ ನಡೆಸುತ್ತಿದ್ದ ಲಘು ಯುದ್ಧ ವಿಮಾನ ಮಿಗ್ 21 ಅಪಘಾತಕ್ಕೀಡಾಗಿದ್ದು, ದುರಂತದಲ್ಲಿ ಪೈಲಟ್ ಸಾವನ್ನಪ್ಪಿದ್ದಾರೆ.
ದಕ್ಷಿಣ ಕಾಶ್ಮೀರದ ಅನಂತ್ನಾಕ್ ಜಿಲ್ಲೆಯ ಬಿಜ್ಬೆಹರ್ನಲ್ಲಿ ವಾಯುಸೇನೆಗೆ ಸೇರಿದ ಲಘು ಯುದ್ಧ ವಿಮಾನ ಮಿಗ್ 21 ಇಂದು ಬೆಳಗ್ಗೆ ಪ್ರಾಯೋಗಿಕ ಹಾರಾಟ ನಡೆಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಈ ದುರಂತದಲ್ಲಿ ಪೈಲಟ್ ರಘು ಬನ್ಸಿ ಎಂಬುವರು ಮೃತಪಟ್ಟಿದ್ದಾರೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.
ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಸದ್ಯ ಅಪಘಾತ ಸ್ಥಳಕ್ಕೆ ಭಾರತೀಯ ವಾಯುಸೇನೆ ಅಧಿಕಾರಿಗಳು ತೆರಳಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಅಪಘಾತದ ಸುದ್ದಿ ತಿಳಿದ ಕೂಡಲೆ ಟ್ವೀಟ್ ಮಾಡಿರುವ ಜಮ್ಮ ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು, ರಘು ಬನ್ಸಿ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾರೈಸಿದರು. ಜತೆಗೆ ರಘು ಬನ್ಸಿ ಅವರ ಕುಟುಂಬಕ್ಕೆ ಸ್ವಾಂತನ ಹೇಳಿದ್ದಾರೆ.
ವಾಯುಸೇನೆಗೆ ಸೇರಿದ ಯುದ್ಧ ವಿಮಾನಗಳು ಪದೇ ಪದೇ ಅಪಘಾತಕ್ಕೀಡಾಗುತ್ತಿರುವುದು ವಾಯುಸೇನೆ ಅಧಿಕಾರಿಗಳ ಆತಂಕಕ್ಕೆ ಕಾರಣವಾಗಿದೆ.