ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮೋದಿ ಜತೆ ಸಕಾರಾತ್ಮಕ ಮಾತುಕತೆ ನಡೆದಿದೆ: ಪಾಕ್ ಪ್ರಧಾನಿ ಷರೀಫ್

ಉಭಯ ದೇಶಗಳ ಪಾಲಿಗೆ ಇದು ಐತಿಹಾಸಿಕ ಕ್ಷಣ ಎಂದು ಹೇಳಿರುವ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರು,...

Lingaraj Badiger
Updated On : 27 May 2014, 5:10 am

ನವದೆಹಲಿ: ಉಭಯ ದೇಶಗಳ ಪಾಲಿಗೆ ಇದು ಐತಿಹಾಸಿಕ ಕ್ಷಣ ಎಂದು ಹೇಳಿರುವ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರು, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಡೆದ ದ್ವಿಪಕ್ಷೀಯ ಮಾತುಕತೆ ಸಕಾರಾತ್ಮಕವಾಗಿದೆ ಎಂದು ಮಂಗಳವಾರ ಹೇಳಿದ್ದಾರೆ.

ದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಸುಮಾರು 50 ನಿಮಿಷಗಳ ಕಾಲ ಭಾರತದ ನೂತನ ಪ್ರಧಾನಿ ಮೋದಿ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಷರೀಫ್, ಭಾರತಕ್ಕೆ ಭೇಟಿ ನೀಡಿರುವುದಕ್ಕೆ ನನಗೆ ಹೆಮ್ಮೆ ಎನಿಸುತ್ತಿದೆ. ಮೋದಿ ಅವರೊಂದಿಗೆ ಸಕಾರಾತ್ಮಕ ಮಾತುಕತೆ ನಡೆದಿದೆ ಎಂದು ತಿಳಿಸಿದರು.

ಮಾತುಕತೆ ವೇಳೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ವಿದೇಶಾಂಗ ಕಾರ್ಯದರ್ಶಿ ಸುಜಾತಾ ಸಿಂಗ್ ಸಹ ಉಪಸ್ಥಿತರಿದ್ದರು.

ಮೂಲಗಳ ಪ್ರಕಾರ, ಮೋದಿ ಈ ಐದು ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ.
1. ಭಯೋತ್ಪಾದಕರ ದಾಳಿ ಕೂಡಲೇ ನಿಲ್ಲಬೇಕು
2. ಮುಂಬೈ ದಾಳಿ ಪ್ರಕರಣದ ವಿಚಾರಣೆ ತೃಪ್ತಿಕರವಾಗಿಲ್ಲ
3. ಮುಂಬೈ ದಾಳಿ ಕೋರರ ವಿರುದ್ಧ ಪಾಕಿಸ್ತಾನ ಯಾವುದೇ ಕ್ರಮಕೈಗೊಂಡಿಲ್ಲ
4. ಮುಂಬೈ ದಾಳಿಕೋರರ ಧ್ವನಿ ಮಾದರಿ ನೀಡಲು ಒತ್ತಾಯ
5. ಉಗ್ರರ ದಮನಕ್ಕೆ ಪ್ರಾದೇಶಿಕ ಸಹಕಾರ ಅಗತ್ಯ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement