ಮೋದಿ ಸಂಪುಟದಲ್ಲಿ ಅಸಮಾಧಾನದ ಹೊಗೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಮಹತ್ವದ ಖಾತೆ...
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಮಹತ್ವದ ಖಾತೆ ಸಿಗದೆ ಇರೋದಕ್ಕೆ ಸಂಸದ ಅನಂತ್ ಗೀತೆ ಅವರು ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಿನ್ನೆ ರಾಷ್ಟ್ರಪತಿ ಭವನದ ಆವರಣದಲ್ಲಿ ಮೋದಿ ಅವರೊಂದಿಗೆ ಪ್ರಮಾಣವಚನ ಸ್ವೀಕರಿಸಿದ್ದ ಸಂಪುಟ ಸಚಿವರಿಗೆ ಇಂದು ಅಧಿಕೃತವಾಗಿ ಖಾತೆ ಹಂಚಿಕೆ ಮಾಡಲಾಗಿತ್ತು. ಇದರಲ್ಲಿ ಅನಂತ ಗಂಗಾರಾಮ್ ಗೀತೆ ಅವರಿಗೆ ಬೃಹತ್ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮ ಖಾತೆಯನ್ನು ನೀಡಲಾಗಿತ್ತು.
ಮಹಾರಾಷ್ಟ್ರದ ರಾಯಗಡ ಲೋಕಸಭಾ ಕ್ಷೇತ್ರದಿಂದ ಶಿವಸೇನೆ ಪಕ್ಷದಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದ ಅನಂತ ಗಂಗಾರಾಮ್ ಗೀತೆ ಅವರಿಗೆ ಮೋದಿ ಸಂಪುಟದಲ್ಲಿ ಬೃಹತ್ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮ ಖಾತೆಯನ್ನು ನೀಡಲಾಗಿತ್ತು. ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಅವರು ಖಾತೆ ವಹಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ.
ಇದೇ ವೇಳೆ, ತಮ್ಮ ಪಕ್ಷದ ಅಭ್ಯರ್ಥಿಗೆ ಮೋದಿ ಸಂಪುಟದಲ್ಲಿ ಮಹತ್ವದ ಖಾತೆ ಸಿಗದೆ ಇರೋದಕ್ಕೆ ಶಿವಸೇನೆ ಸಹ ಅತೃಪ್ತಿ ವ್ಯಕ್ತಪಡಿಸಿದೆ. ಅನಂತ್ ಗೀತೆ ಅವರಿಗೆ ಮಹತ್ವದ ಖಾತೆ ನೀಡುವಂತೆ ಒತ್ತಾಯಿಸಿದೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿದ್ದರು ತಮ್ಮ ಮಿತ್ರಪಕ್ಷಗಳೊಂದಿಗೆ ಸೇರಿ ಸರ್ಕಾರ ರಚಿಸುವುದಾಗಿ ಹೇಳಿತ್ತು. ಹೀಗಾಗಿ ಅನಂತ ಗೀತೆ ಅವರಿಗೆ ಮೋದಿ ಸಂಪುಟದಲ್ಲಿ ಸ್ಥಾನ ಸಿಕ್ಕಿತು. ಆದರೆ ಇದೀಗ ಅನಂತ ಗೀತೆ ಅವರು ತಮಗೆ ಮಹತ್ವದ ಖಾತೆ ನೀಡದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.