ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ವೈಯಕ್ತಿಕ ಬಾಂಡ್ ನೀಡಿ ಬೇಲ್ ಪಡೆಯಲು ಕೇಜ್ರಿವಾಲ್ ಒಪ್ಪಿಗೆ

Lingaraj Badiger
Updated On : 27 May 2014, 4:24 am

ನವದೆಹಲಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ನೀಡಿದ್ದ ಮಾನನಷ್ಟ ಪ್ರಕರಣದಲ್ಲಿ ಜೈಲು ಪಾಲಾಗಿರುವ ದೆಹಲಿ ಮಾಜಿ ಮುಖ್ಯಮಂತ್ರಿ ಹಾಗೂ ಅಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರು ಕಡೆಗೂ ವೈಯಕ್ತಿಕ ಬಾಂಡ್ ನೀಡಿ, ಜಾಮೀನು ಪಡೆಯಲು ಒಪ್ಪಿಗೆ ಸೂಚಿಸಿದ್ದಾರೆ.

ಪ್ರಕರಣದ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಇದೊಂದು ಪ್ರತಿಷ್ಠೆಯ ವಿಷಯವಾಗಿ ತೆಗೆದುಕೊಳ್ಳದೇ ಮೊದಲು ಬಾಂಡ್ ನೀಡಿ ಜಾಮೀನು ಪಡೆದುಕೊಳ್ಳಿ ಎಂದು ಕೇಜ್ರಿವಾಲ್‌ಗೆ ಸೂಚಿಸಿದೆ.

ಚುನಾವಣೆಗೂ ಮುನ್ನ ಭ್ರಷ್ಟ್ರರ ಪಟ್ಟಿ ಬಿಡುಗಡೆ ಮಾಡಿದ್ದ ಅರವಿಂದ್ ಕೇಜ್ರಿವಾಲ್ ನಿತಿನ್ ಗಡ್ಕರಿ ಅವರ ಹೆಸರನ್ನು ಸೇರಿಸಿದ್ದರು. ನಿತಿನ್ ಗಡ್ಕರಿ ದೆಹಲಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಪ್ರಕರಣದ ವಿಚಾರಣೆ ನಡೆಸಿದ್ದ ವಿಚಾರಣಾಧೀನ ಕೋರ್ಟ್, 10 ಸಾವಿರ ರುಪಾಯಿ ಮೊತ್ತದ ವೈಯಕ್ತಿಕ ಬಾಂಡ್ ನೀಡಿ ಜಾಮೀನು ಪಡೆದುಕೊಳ್ಳುವಂತೆ ಸೂಚಿಸಿತ್ತು. ಆದರೆ ಇದಕ್ಕೆ ಕೇಜ್ರಿವಾಲ್ ಅವರು ಒಪ್ಪಿರಲಿಲ್ಲ. ನಾನೇಕೆ ಜಾಮೀನು ಪಡೆಯಲಿ ಎಂದು ದೆಹಲಿ ಮಾಜಿ ಸಿಎಂ ಪ್ರಶ್ನಿಸಿದ್ದರು. ಹೀಗಾಗಿ ಕೋರ್ಟ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಆದೇಶಿಸಿತ್ತು.

ಕೋರ್ಟ್‌ನ ಈ ಆದೇಶವನ್ನು ಪ್ರಶ್ನಿಸಿ ಕೇಜ್ರಿವಾಲ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು ಕೇಜ್ರಿವಾಲ್ ಅವರ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಕೈಲಾಶ್ ಗಂಭೀರ್ ಹಾಗೂ ನ್ಯಾ.ಸುನಿತಾ ಗುಪ್ತಾ ಅವರು, ಬಾಂಡ್ ನೀಡಿ ಜಾಮೀನು ಪಡೆದುಕೊಳ್ಳುವಂತೆ ಸೂಚಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement