ಲೋಕಸಭೆ ಹಂಗಾಮಿ ಸ್ಪೀಕರ್ ಆಗಿ ಕಮಲ್ ನಾಥ್ ನೇಮಕ?
ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಕಮಲ್ ನಾಥ್ ...
ನವದೆಹಲಿ: ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಕಮಲ್ ನಾಥ್ ಅವರು ಆಯ್ಕೆಯಾಗುವ ಸಾಧ್ಯತೆ ಇದೆ.
ಈ ಸಂಬಂಧ ಕೇಂದ್ರ ಸರ್ಕಾರ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಪ್ರಸ್ತಾವನೆ ಕಳುಹಿಸಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಎಂ.ವೆಂಕಯ್ಯ ನಾಯ್ಡು ಅವರು ಬುಧವಾರ ತಿಳಿಸಿದ್ದಾರೆ.
9 ಬಾರಿ ಸಂಸದರಾಗಿ ಆಯ್ಕೆಯಾಗಿರುವ ಕಮಲ್ ನಾಥ್ ಅವರು ಈಗ ಹಂಗಾಮಿ ಸ್ಪೀಕರ್ ಆಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದ್ದು, ಅವರೇ ನೂತನ ಸಂಸದರಿಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.