ಜೂ.3ಕ್ಕೆ ತಮಿಳುನಾಡು ಸಿಎಂ ಜಯಲಲಿತಾರಿಂದ ಪ್ರಧಾನಿ ಭೇಟಿ
ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಇದೇ ಜೂನ್ 3ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆ.
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಇದೇ ಜೂನ್ 3ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆ.
ಮೋದಿ ಪ್ರಮಾಣವಚನ ಸಮಾರಂಭಕ್ಕೆ ಶ್ರೀಲಂಕಾ ಅಧ್ಯಕ್ಷೆ ಮಹಿಂದಾ ರಾಜಪಕ್ಷೆ ಅವರನ್ನು ಆಹ್ವಾನಿಸಿದ್ದಕ್ಕೆ ಜಯಲಲಿತಾ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ಸಮಾರಂಭಕ್ಕೆ ಗೈರು ಆಗುವ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದರು. ಇದೀಗ ರಾಜ್ಯದ ಹಿತದೃಷ್ಟಿಯಿಂದ ತಮ್ಮ ಮುನಿಸು ಮರೆತು ಪ್ರಧಾನಿ ಭೇಟಿ ಮಾಡಲು ಮುಂದಾಗಿದ್ದಾರೆ. ರಾಜಪಕ್ಷೆ ಭೇಟಿಗೆ ತಮಿಳುನಾಡಿನ ಎಲ್ಲಾ ರಾಜಕೀಯ ಪಕ್ಷಗಳು ಸಹ ವಿರೋಧ ವ್ಯಕ್ತಪಡಿಸಿದ್ದವು.
ಮೋದಿ ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಅವರನ್ನು ಭೇಟಿ ಮಾಡುತ್ತಿರುವ ಜಯಾ, ತಮಿಳುನಾಡಿಗೆ ಸಂಬಂಧಿಸಿದ ಹಲವು ವಿಷಯಗಳ ಕುರಿತು ಚರ್ಚಿಸುವ ಸಾಧ್ಯತೆ ಇದೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಜಯಲಲಿತಾ ನೇತೃತ್ವದ ಎಐಎಡಿಎಂಕೆ ಪಕ್ಷ 39 ಸ್ಥಾನಗಳ ಪೈಕಿ 37 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.