ಮೋದಿ ಭೇಟಿ ಮಾಡಿದ ಚಂದ್ರಬಾಬು ನಾಯ್ಡು
ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ...
ನವದೆಹಲಿ: ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಜೂನ್ 02ರಂದು ತೆಲಂಗಾಣ ರಾಜ್ಯ ಉದಯವಾಗುವಾಗ ಸೀಮಾಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಬಗ್ಗೆ ನಾಯ್ಡು ಮೋದಿ ಜತೆ ಮಾತುಕತೆ ನಡೆಸಿರುವುದಾಗಿ ಬಲ್ಲಮೂಲಗಳು ಹೇಳಿವೆ.
ಶುಕ್ರವಾರ ಬೆಳಗ್ಗೆ ನಾಯ್ಡು ವಿತ್ತಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿ ಮಾಡಿದ್ದು, ಆಂಧ್ರಪ್ರದೇಶದ ಸಮಸ್ಯೆಗಳನ್ನು ಪರಿಹರಿಸುವುದಾಗಿ ಜೇಟ್ಲಿ ಭರವಸೆ ನೀಡಿರುವುದಾಗಿ ಹೇಳಿದ್ದಾರೆ.
ಸೀಮಾಂಧ್ರಕ್ಕೆ ಕೇಂದ್ರ ಸರ್ಕಾರ ನೀಡಿರುವ ಎಲ್ಲ ಭರವಸೆಗಳನ್ನು ಪೂರೈಸಲಾಗುವುದು. ಈ ಬಗ್ಗೆ ನಾವು ಕೆಲಸ ಆರಂಭಿಸಿದ್ದೇವೆ ಎಂದು ಜೇಟ್ಲಿ ಹೇಳಿರುವುದಾಗಿ ನಾಯ್ಡು ಹೇಳಿದ್ದಾರೆ.