ಎಎಪಿಗೆ ಯೋಗೇಂದ್ರ ಯಾದವ್ ರಾಜಿನಾಮೆ
ಕಳೆದ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿಗೆ ನೈತಿಕ ಹೊಣೆ ಹೊತ್ತು ಆಮ್ ಆದ್ಮಿ ಪಕ್ಷ(ಎಎಪಿ) ಮುಖಂಡ ಯೋಗೇಂದ್ರ ಯಾದವ್ ಅವರು ಶನಿವಾರ...
ನವದೆಹಲಿ: ಕಳೆದ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿಗೆ ನೈತಿಕ ಹೊಣೆ ಹೊತ್ತು ಆಮ್ ಆದ್ಮಿ ಪಕ್ಷ(ಎಎಪಿ) ಮುಖಂಡ ಯೋಗೇಂದ್ರ ಯಾದವ್ ಅವರು ಶನಿವಾರ ರಾಜಿನಾಮೆ ನೀಡಿದ್ದಾರೆ.
ಆಮ್ ಆದ್ಮಿ ಪಕ್ಷದ ಸಂಸ್ಧಾಪಕ ಸದಸ್ಯನಾಗಿದ್ದ ಯೋಗೇಂದ್ರ ಯಾದವ್ ಅವರು, ಹರಿಯಾಣದಲ್ಲಿನ ಎಎಪಿಯ ಹೀನಾಯ ಸೋಲಿನ ಹೊಣೆಹೊತ್ತು ಆಮ್ ಆದ್ಮಿ ಪಕ್ಷ ಎಲ್ಲಾ ಹುದ್ದೆಗಳಿಗೂ ರಾಜಿನಾಮೆ ನೀಡಿದ್ದಾರೆ.
ತಮ್ಮ ರಾಜೀನಾಮೆ ಪತ್ರವನ್ನು ಯೋಗೇಂದ್ರ ಯಾದವ್ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರಿಗೆ ಸಲ್ಲಿಸಿದ್ದಾರೆ. ಆದರೆ, ಕೇಜ್ರಿವಾಲ್ ಯಾದವ್ ಅವರ ರಾಜೀನಾಮೆಯನ್ನು ಇನ್ನೂ ಅಂಗೀಕರಿಸಿಲ್ಲ ಎಂದು ತಿಳಿದುಬಂದಿದೆ.