ಹಂಗಾಮಿ ಸ್ಪೀಕರಾಗಿ ಕಮಲ್ನಾಥ್ ನೇಮಕ
ನವದೆಹಲಿ: ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಮಾಜಿ ಕೇಂದ್ರ ವ್ಯವಹಾರಗಳ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಕಮಲ್ನಾಥ್ರನ್ನು ಶನಿವಾರ ನೇಮಕ ಮಾಡಲಾಗಿದೆ.
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಲೋಕಸಭೆಯ ಹಂಗಾಮಿ ಸ್ಪೀಕರಾಗಿ ಕಮಲ್ನಾಥ್ರನ್ನು ನೇಮಕ ಮಾಡಿದ್ದಾರೆ ಎಂದು ಲೋಕಸಭೆ ಸಚಿವಾಲಯ ಹೇಳಿದೆ.
ನೂತನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಲೋಕಸಭೆಯ ಹಂಗಾಮಿ ಸ್ಪೀಕರಾಗಿ ಕಮಲ್ನಾಥ್ರನ್ನು ನೇಮಕ ಮಾಡಬೇಕು ಎಂದು ರಾಷ್ಟ್ರಪತಿಗಳಿಗೆ ಶಿಫಾರಸ್ಸು ಮಾಡಿದ್ದರು.
ಮುಂದಿನ ಲೋಕಸಭೆ ಅಧಿವೇಶನದಲ್ಲಿ ಹಂಗಾಮಿ ಸ್ಪೀಕರ್ ಕಮಲ್ನಾಥ್ ಅವರು ನೂತನ ಸಂಸದರಿಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.