ದೆಹಲಿಯಲ್ಲಿ 4 ಅಂತಸ್ಥಿನ ಕಟ್ಟಡ ಕುಸಿತ: 2 ಸಾವು
ನಾಲ್ಕು ಅಂತಸ್ಥಿನ ನಿರ್ಮಾಣ ಹಂತದ ಕಟ್ಟಡ ಕುಸಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು...
ನವದೆಹಲಿ: ನಾಲ್ಕು ಅಂತಸ್ಥಿನ ನಿರ್ಮಾಣ ಹಂತದ ಕಟ್ಟಡ ಕುಸಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ೭ ಮಂದಿಗೆ ಗಾಯಗಳಾಗಿರುವ ಘಟನೆ ಭಾನುವಾರ ನಡೆದಿದೆ.
ದೆಹಲಿಯ ಸದರ್‌ಬಜಾರ್‌ನಲ್ಲಿ ನಿರ್ಮಾಣ ಹಂತದಲ್ಲಿದ ನಾಲ್ಕು ಅಂತಸ್ಥಿನ ಕಟ್ಟಡ ಕುಸಿದು ಬಿದ್ದ ಪರಿಣಾಮ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಇಬ್ಬರು ಮೃತಪಟ್ಟಿದ್ದಾರೆ. ಅಲ್ಲದೆ ದುರಂತದಲ್ಲಿ ೭ ಮಂದಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ.
ಸುದ್ದಿ ತಿಳಿದ ಕೂಡಲೆ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು ಕಟ್ಟಡ ಅವಶೇಷಗಳ ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.