ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಬದೌನ್ ಗ್ಯಾಂಗ್‌ರೇಪ್: ಕುಟುಂಬಸ್ಥರಿಗೆ ಮಾಯಾ ಸಾಂತ್ವನ

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ಐವರ...

Vishwanath S
Updated On : 1 Jun 2014, 7:33 am

ಬದೌನ್: ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ಐವರ ದುಷ್ಕೃತ್ಯಕ್ಕೆ ಬಲಿಯಾದ ಇಬ್ಬರು ದಲಿತ ಬಾಲಕಿಯರ ಮನೆಗೆ ಭಾನುವಾರ ಭೇಟಿ ನೀಡಿದ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಗ್ರಾಮಕ್ಕೆ ಹೆಲಿಕಾಫ್ಟರ್ ಮೂಲಕ ಬಂದಿಳಿದ ಮಾಯಾವತಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು ಬಳಿಕ ದಲಿತ ಬಾಲಕಿಯರ ಶವಗಳನ್ನು ನೇಣು ಹಾಕಿದ ಜಾಗದಲ್ಲಿ ಮಾತನಾಡಿದ ಅವರು, ಬಾಲಕಿಯರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾವದ್ ಅವರ ಹೇಳಿಕೆಯಿಂದಾಗಿಯೇ ಉತ್ತರಪ್ರದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಆರೋಪಿಸಿದರು. ಉತ್ತರಪ್ರದೇಶದಲ್ಲಿ ದಲಿತ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದ್ದು, ಜಂಗಲ್ ರಾಜ್ ವ್ಯವಸ್ಥೆ ಶುರುವಾಗಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವ ಉತ್ತರಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಮಾಯಾವತಿ ಒತ್ತಾಯಿಸಿದ್ದಾರೆ.

ದೇಶಾದ್ಯಂತ ಖಂಡನೆಗೆ ಒಳಗಾಗಿರುವ ಬದೌನ್ ದಲಿತರ ರೇಪ್ ಕೇಸ್ ಘಟನೆ ನಡೆದ ಗ್ರಾಮಕ್ಕಾಗಮಿಸಿದ ಮಾಯಾವತಿಯನ್ನು ಹೆಲಿಕಾಫ್ಟರನ್ನು ಇಳಿಸುವುದಕ್ಕಾಗಿ ಹೆಲಿಪ್ಯಾಡ್‌ನ್ನು ಚಿಕ್ಕ ಬಾಲಕನಿಂದ ಸ್ವಚ್ಛಗೊಲಿಸಿದ್ದು ವಿವಾದಕ್ಕೆ ಕಾರಣವಾಗಿದೆ.

ನಿನ್ನೆಯಷ್ಟೆ ಹತ್ಯಾಚಾರಕ್ಕೊಳಗಾದ ದಲಿತ ಬಾಲಕಿಯರ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಆಗ್ರಹಿಸಿದ್ದರಿಂದ ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಿತ್ತು.

ಘಟನೆ ನಡೆದು ಐದು ದಿನ ಕಳೆದರು ಇಲ್ಲಿಯವರೆಗೂ ಉತ್ತರಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹತ್ಯಾಚಾರಕೊಳ್ಳಗಾದ ದಲಿತ ಬಾಲಕಿಯ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳದೆ ಇರುವುದು ತೀವ್ರ ವಿರೋಧಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement