ಸಾಂದರ್ಭಿಕ ಚಿತ್ರ 
LIVE

Live: ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢ ಚುನಾವಣಾ ಫಲಿತಾಂಶ: ಮತ ಎಣಿಕೆ ಪ್ರಗತಿಯಲ್ಲಿ, ಕೆಲವೇ ಗಂಟೆಗಳಲ್ಲಿ ಸ್ಪಷ್ಟ ಚಿತ್ರಣ

ಇತ್ತೀಚೆಗೆ ಚುನಾವಣೆ ನಡೆದ 5 ರಾಜ್ಯಗಳ ಪೈಕಿ 4 ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದ ಮತ ಎಣಿಕೆ ಪ್ರಗತಿಯಲ್ಲಿದೆ. 

ನವದೆಹಲಿ: ಇತ್ತೀಚೆಗೆ ಚುನಾವಣೆ ನಡೆದ 5 ರಾಜ್ಯಗಳ ಪೈಕಿ 4 ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದ ಮತ ಎಣಿಕೆ ಪ್ರಗತಿಯಲ್ಲಿದೆ. 

ತೆಲಂಗಾಣ, ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನ ರಾಜ್ಯಗಳ ಫಲಿತಾಂಶಗಳು ಹೊರಹೊಮ್ಮುತ್ತಿದ್ದಂತೆ, ಈ ಚುನಾವಣೆ ಎರಡು ಪ್ರಮುಖ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ತೀವ್ರ ಜಿದ್ದಾಜಿದ್ದಿನ ಪ್ರತಿಷ್ಠೆಯ ಕಣವಾಗಿವೆ. 

ದೇಶದ ಅತ್ಯಂತ ಹಳೆಯ ಪಕ್ಷ ಕಾಂಗ್ರೆಸ್ ತೆಲಂಗಾಣದಲ್ಲಿ ಪುನರಾಗಮನ ಮಾಡುತ್ತಿದ್ದು, ಛತ್ತೀಸ್‌ಗಢವನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ. ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ ರಾಜಸ್ಥಾನ ಮತ್ತು ಮಧ್ಯ ಪ್ರದೇಶದಲ್ಲಿ ಮತದಾರರು ಕಮಲದ ಮೇಲೆ ಒಲವು ತೋರಿದಂತಿದೆ. 

ಭಾರತದ ಹೊಸ ರಾಜ್ಯವಾದ ತೆಲಂಗಾಣ ಆ ರಾಜ್ಯ ರಚನೆಯ ಮುಂದಾಳತ್ವ ವಹಿಸಿದ ಕೆಸಿಆರ್ ನ್ನು ಸೋಲಿಸಿದರೆ ಇದು ಬಿಆರ್ ಎಸ್ ಪಕ್ಷಕ್ಕೆ ದೊಡ್ಡ ಆಘಾತವಾಗಲಿದೆ. ಮಧ್ಯಪ್ರದೇಶದಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಬಿಜೆಪಿಯ ಸುದೀರ್ಘ ಅವಧಿಯ ಮುಖ್ಯಮಂತ್ರಿಯಾಗುವ ಲಕ್ಷಣವಿದೆ.

ಛತ್ತೀಸ್‌ಗಢದಲ್ಲಿ, ಭೂಪೇಶ್ ಬಘೇಲ್ ಅವರು ಅಧಿಕಾರಕ್ಕೆ ಮರಳಲು ಉತ್ಸುಕರಾಗಿದ್ದಾರೆ. ಬಿಜೆಪಿಯಿಂದ ಮಾಜಿ ಸಿಎಂ ರಮಣ್ ಸಿಂಗ್ ಅವರು ತಮ್ಮ ಪಕ್ಷವನ್ನು ಗೆಲುವಿನತ್ತ ಮುನ್ನಡೆಸುವ ಉತ್ಸಾಹದಲ್ಲಿದ್ದಾರೆ. 

ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೋಟ್ ಅವರು ಮತ್ತೊಮ್ಮೆ ಅಧಿಕಾರಕ್ಕೆ ಬರಲು ಆಶಿಸಿದ್ದರಾದರೂ ಈ ರಾಜ್ಯದ ಇತಿಹಾಸದಲ್ಲಿ ಒಮ್ಮೆ ಅಧಿಕಾರಕ್ಕೆ ಬಂದ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬಂದದ್ದಿಲ್ಲ. ನವೆಂಬರ್ 7 ರಂದು ಚುನಾವಣೆ ನಡೆದ ಮಿಜೋರಾಂ ಫಲಿತಾಂಶ ನಾಳೆ ಡಿಸೆಂಬರ್ 4 ರಂದು ಪ್ರಕಟವಾಗಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT