ರಾಜ್ಯ ವಿಧಾನ ಪರಿಷತ್‌ನ 4 ಕ್ಷೇತ್ರಗಳ ಚುನಾವಣೆಯ ಮತ ಎಣಿಕೆ ಮಂಗಳವಾರ ಬೆಳಗ್ಗೆ 8 ಗಂಟೆಯಿಂದ ಆರಂಭವಾಗಿದ್ದು, ಸಂಜೆಯೊಳಗೆ ಫಲಿತಾಂಶ ಹೊರಬೀಳುವ ಸಾಧ್ಯತೆಯಿದೆ.
ಪಶ್ಚಿಮ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿರುವ ಸ್ಟ್ರಾಂಗ್ ರೂಂ ತೆರೆಯಲಾಗಿದೆ.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿಚಾರವಾಗಿ ವಿವಾದ ಮುಂದುವರಿದಿರುವ ಬೆನ್ನಲ್ಲೇ, ಭಾರತದ ಚುನಾವಣಾ ಆಯೋಗ ಇನ್ನಷ್ಟು ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ತಮ್ಮದೇ ಭಿನ್ನಾಭಿಪ್ರಾಯದ ಪತ್ರಗಳಿಂದ ಹಿಂದೆ ಸರಿಯುವಂತೆ ಚುನಾವಣಾ ಆಯುಕ್ತರ ಮೇಲೆ ಕೇಂದ್ರ ಸರ್ಕಾರ ಒತ್ತಡ ಹೇರುತ್ತಿದೆ. ಈ ಪತ್ರಗಳನ್ನು ಕಾಂಗ್ರೆಸ್ ಪಕ್ಷ ಬರೆದಿಲ್ಲ. ಸ್ವತಃ ಚುನಾವಣಾ ಆಯುಕ್ತರೇ ಬರೆದಿದ್ದಾರೆ. ನಿರ್ಧಾರವನ್ನು ಏಕಪಕ್ಷೀಯವಾಗಿ ತೆಗೆದುಕೊಳ್ಳಲಾಗಿದೆಯೇ ಅಥವಾ ಸರ್ವಾನುಮತದಿಂದ ಕೈಗೊಳ್ಳಲಾಗಿದೆಯೇ ಎಂಬುದೇ ಪ್ರಶ್ನೆ ಎಂದು ಹೇಳಿದ್ದಾರೆ.
ಆದರೆ, ಸಭೆಯ ನಡಾವಳಿಗಳಲ್ಲಿ ಈ ಬಗ್ಗೆ ಉಲ್ಲೇಖವಿಲ್ಲವಲ್ಲವೇ? ಆ ನಡಾವಳಿಗಳನ್ನು ಪರಿಶೀಲಿಸುವ ಯಾರಿಗಾದರೂ ಮೂವರು ಚುನಾವಣಾ ಆಯುಕ್ತರಲ್ಲಿ ಇಬ್ಬರು ಜ್ಞಾನೇಶ್ ಕುಮಾರ್ ಅವರ ಕ್ರಮವನ್ನು ಒಪ್ಪಿರಲಿಲ್ಲ ಎಂಬುದು ಸ್ಪಷ್ಟವಾಗಿ ತಿಳಿಯುತ್ತದೆ. ಹಾಗಿದ್ದರೆ ಜ್ಞಾನೇಶ್ ಕುಮಾರ್ ಏಕೆ ಉತ್ತರಿಸುತ್ತಿಲ್ಲ? ಸಾಂವಿಧಾನಿಕ ಸಂಸ್ಥೆಯೊಂದರ ಪರವಾಗಿ ಬಿಜೆಪಿ ನಾಯಕರು ಏಕೆ ಉತ್ತರಿಸುತ್ತಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.
ಭಾರತದಲ್ಲಿ ವಿಧಾನ ಪರಿಷತ್ತಿನ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಿಗೆ ನಡೆಯುವ ಚುನಾವಣೆಗಳು ಪರೋಕ್ಷ ಚುನಾವಣೆಗಳಾಗಿವೆ. ಈ ಕ್ಷೇತ್ರಗಳಲ್ಲಿ ಅರ್ಹ ಶಿಕ್ಷಕರು ಮತ್ತು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಂಡಿರುವ ಪದವೀಧರರು ಮಾತ್ರ ಮತ ಚಲಾಯಿಸಬಹುದು.
ಪದವೀಧರ ಕ್ಷೇತ್ರದಲ್ಲಿ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಲು, ಯಾವುದೇ ಮಾನ್ಯತೆ ಪಡೆದ ಭಾರತೀಯ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು ಅಥವಾ ಅದಕ್ಕೆ ಸಮಾನವಾದ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಅದೇ ರೀತಿ, ಶಿಕ್ಷಕರ ಕ್ಷೇತ್ರದಲ್ಲಿ ಮತ ಚಲಾಯಿಸಲು, ಕಳೆದ ಆರು ವರ್ಷಗಳ ಅವಧಿಯಲ್ಲಿ ಕನಿಷ್ಠ ಮೂರು ವರ್ಷಗಳ ಕಾಲ ಮಾಧ್ಯಮಿಕ ಶಾಲೆ ಅಥವಾ ಅದಕ್ಕಿಂತ ಮೇಲಿನ ಹಂತದ ಶಿಕ್ಷಣ ಸಂಸ್ಥೆಯಲ್ಲಿ ಪೂರ್ಣಾವಧಿ ಶಿಕ್ಷಕರಾಗಿ ಕಾರ್ಯನಿರ್ವಹಿಸಿರಬೇಕು.
ಎಂಎಲ್‌ಸಿ ಚುನಾವಣೆಯಲ್ಲಿ ಕಾಂಗ್ರೆಸ್ ನಾಲ್ಕೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ವಿಶ್ವಾಸವಿದೆ ವ್ಯಕ್ತಪಡಿಸಿದ್ದಾರೆ.
ಈ ಬಾರಿ ನಾಲ್ಕೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಸಾಮಾನ್ಯವಾಗಿ ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗುತ್ತಿತ್ತು. ಆದರೆ, ಈ ಬಾರಿ ಪದವೀಧರರು ಹಾಗೂ ಶಿಕ್ಷಕರು ಎದುರಿಸುತ್ತಿದ್ದ ಹಲವು ಸಮಸ್ಯೆಗಳನ್ನು ಸರ್ಕಾರ ಪರಿಹರಿಸಿದೆ. ಹೀಗಾಗಿ ಈ ವರ್ಗದ ಮತದಾರರು ಕಾಂಗ್ರೆಸ್‌ಗೆ ಬೆಂಬಲ ನೀಡುವ ನಿರೀಕ್ಷೆಯಿದೆ.
ಪದವೀಧರರು ಮತ್ತು ಶಿಕ್ಷಕರೊಂದಿಗೆ ಸಭೆ ನಡೆಸಿದ ಸಂದರ್ಭದಲ್ಲಿಯೂ ಸರ್ಕಾರದ ಪರವಾಗಿ ಬೆಂಬಲ ವ್ಯಕ್ತವಾಗಿದೆ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ನಾಲ್ಕೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.
ರಾಜ್ಯ ವಿಧಾನಪರಿಷತ್ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು, ಮತ ಎಣಿಕೆಯ ಆರಂಭಿಕ ಹಂತ ಶುರುವಾಗಿದೆ. ಬ್ಯಾಲೆಟ್ ಪತ್ರಗಳ ಬಂಡಲ್ ಮಾಡುವ ಕಾರ್ಯ ಆರಂಭಗೊಂಡಿದ್ದು, ಈ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮತ ಎಣಿಕೆ ಕಾರ್ಯ ನಡೆಯಲಿದೆ.
ಬೆಂಗಳೂರು ಶಿಕ್ಷಕರ ಕ್ಷೇತ್ರ
ಕಾಂಗ್ರೆಸ್ ಅಭ್ಯರ್ಥಿ- ಪುಟ್ಟಣ್ಣ
ಎನ್‌ಡಿಎ ಅಭ್ಯರ್ಥಿ- ಎ.ಪಿ.ರಂಗನಾಥ್
ಈಶಾನ್ಯ ಶಿಕ್ಷಕರ ಕ್ಷೇತ್ರ
ಕಾಂಗ್ರೆಸ್ ಅಭ್ಯರ್ಥಿ- ಶರಣಪ್ಪ ಮಟ್ಟೂರು
ಎನ್‌ಡಿಎ ಅಭ್ಯರ್ಥಿ- ಶಶೀಲ್ ಜಿ ನಮೋಶಿ
ಆಗ್ನೇಯ ಪದವೀಧರ ಕ್ಷೇತ್ರ
ಕಾಂಗ್ರೆಸ್ ಅಭ್ಯರ್ಥಿ- ಶಶಿ ಹುಲಿಕುಂಟೆಮಠ
ಎನ್‌ಡಿಎ ಅಭ್ಯರ್ಥಿ- ಕೆ.ಎಂ.ಸುರೇಶ್
ಪಶ್ಚಿಮ ಪದವೀಧರ ಕ್ಷೇತ್ರ
ಕಾಂಗ್ರೆಸ್ ಅಭ್ಯರ್ಥಿ- ಮೋಹನ್ ಲಿಂಬಿಕಾಯಿ
ಎನ್‌ಡಿಎಅಭ್ಯರ್ಥಿ- ಎಸ್.ವಿ. ಸಂಕನೂರು
ಬೆಂಗಳೂರು ಶಿಕ್ಷಕರ ಕ್ಷೇತ್ರ 81.98%
ಈಶಾನ್ಯ ಶಿಕ್ಷಕರ ಕ್ಷೇತ್ರ 86.97%
ಆಗ್ನೇಯ ಪದವೀಧರ ಕ್ಷೇತ್ರ 73.58%
ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ 75.62%
ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನಲ್ಲಿ ಶಿಕ್ಷಕರ ಹಾಗೂ ಆಗ್ನೇಯ ಪದವೀಧರ ಕ್ಷೇತ್ರಗಳ ಮತ ಎಣಿಕೆ ಶುರುವಾಗಿದ್ದು, ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಇರುವ ಕಾಲೇಜಿನ ಮತ ಎಣಿಕೆ ಕೇಂದ್ರಕ್ಕೆ ಪೊಲೀಸ್ ಬಿಗಿ ಭದ್ರತೆ ನಿಯೋಜನೆ ಮಾಡಲಾಗಿದೆ.
ಕಳೆದ ಶುಕ್ರವಾರ (ಅ.23) ಪಶ್ಚಿಮ ಪದವೀಧರ ಕ್ಷೇತ್ರ , ಆಗ್ನೇಯ ಪದವೀಧರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಮತದಾನ ನಡೆದಿತ್ತು. ಈ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ.
ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಎಸ್.ವಿ. ಸಂಕನೂರ್ ಹಾಗೂ ಕಾಂಗ್ರೆಸ್‌ನ ಮೋಹನ ಲಿಂಬಿಕಾಯಿ, ಆಗ್ನೆಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಶಶಿ ಹುಲಿಕುಂಟೆಮಠ ಮತ್ತು ಬಿಜೆಪಿಯ ಕೆ.ಎಂ. ಸುರೇಶ, ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯ ಶಶೀಲ್ ಜಿ. ನಮೋಶಿ ಹಾಗೂ ಕಾಂಗ್ರೆಸ್‌ನ ಶರಣಪ್ಪ ಮಟ್ಟೂರು ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಪುಟ್ಟಣ್ಣ ಹಾಗೂ ಜೆಡಿಎಸ್‌ನ ಎ.ಪಿ. ರಂಗನಾಥ್ ಪ್ರಮುಖ ಕಣದಲ್ಲಿದ್ದಾರೆ.