ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ 
ಹಿನ್ನೋಟ 2014

ಜೈಲು ಶಿಕ್ಷೆ ಅನುಭವಿಸಿದ 'ಜಯಾ'

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಅಭಿಮಾನಿಗಳು ಎಂದೂ ಮರೆಯದ ವರ್ಷ 2014. ಏಕೆಂದರೆ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಜಯಲಲಿತಾ ಅವರನ್ನು ಇನ್ನಿಲ್ಲದಂತೆ ಕಾಡಿತ್ತು. ಸ್ನೇಹಿತೆಯ ಪುತ್ರ ಸುಧಾಕರನ್ ಅವರ ಮದುವೆಯನ್ನು ಅದ್ಧೂರಿಯಾಗಿ ನೆರವೇರಿಸುವ ಮೂಲಕ ರಾಜಕೀಯ ಶತ್ರುಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಇನ್ನು ಇದೇ ವಿಚಾರವನ್ನು ಮುಂದಿಟ್ಟುಕೊಂಡು ಜನತಾಪಕ್ಷದ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರು ನ್ಯಾಯಾಲಯದಲ್ಲಿ ದೂರು ಸಲ್ಲಿಕೆ ಮಾಡಿದ್ದರು. ದೂರಿನ ವಿಚಾರಣೆ ಸಿಬಿಐ ನ್ಯಾಯಾಲಯಕ್ಕೆ ಹಸ್ತಾಂತರವಾಗಿತ್ತು.

ಬೆಂಗಳೂರಿನ ಪರಪ್ಪನ ಅಗ್ರಹಾರದ ಆವರಣದಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯ ಸತತ ವಿಚಾರಣೆ ನಡೆಸಿ ಅಂತಿಮವಾಗಿ ಕಳೆದ ಸೆಪ್ಟೆಂಬರ್ 27ರಂದು ತೀರ್ಪು ನೀಡಿತ್ತು. ಪ್ರಕರಣದಲ್ಲಿ ಜಯಲಲಿತಾ ಅವರಿಗೆ 4 ವರ್ಷ ಜೈಲು ಶಿಕ್ಷೆಯಾಗಿತ್ತು. ತೀರ್ಪು ಪ್ರಕಟವಾಗುತ್ತಿದ್ದಂತೆಯೇ ಇಡೀ ತಮಿಳುನಾಡು ರಾಜ್ಯ ಒಂದು ಕ್ಷಣ ಸ್ಥಬ್ದವಾಗಿತ್ತು. ಅಂದೇ ಜಯಲಲಿತಾ ಅವರನ್ನು ಪರಪ್ಪನ ಅಗ್ರಹಾರದ ಜೈಲಿಗೆ ರವಾನೆ ಮಾಡಲಾಗಿತ್ತು. ಜಯಲಲಿತಾ ಅವರ ವಿರುದ್ಧವಾಗಿ ತೀರ್ಪು ಬರುತ್ತದೆ ಎನ್ನುವ ಕಲ್ಪನೆಯನ್ನೂ ಮಾಡಿರದ ಅವರ ಬೆಂಬಲಿಗರು ಏಕಾಏಕಿ ತಮಿಳುನಾಡಿನಾದ್ಯಂತ ಪ್ರತಿಭಟನೆಗೆ ಇಳಿದರು.

ಜಯಲಲಿತಾ ಅವರ ಸ್ಥಾನಕ್ಕೆ ಅವರ ಕಟ್ಟಾ ಬೆಂಬಲಿಗರಾಗಿದ್ದ ಪನ್ನೀರ್ ಸೆಲ್ವಂ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಕೊನೆಗೆ ಸತತ 21 ದಿನಗಳ ಜೈಲು ವಾಸದ ಬಳಿಕ ಕರ್ನಾಟಕ ಹೈಕೋರ್ಟ್ ಜಯಲಲಿತಾ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಕರ್ನಾಟಕ ಹೈಕೋರ್ಟ್‌ನಲ್ಲಿ ತೀರ್ಪಿನ ವಿರುದ್ಧದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಯಲಿದ್ದು, ಇನ್ನು ಮೂರು ತಿಂಗಳಲ್ಲಿ ಅರ್ಜಿಯ ವಿಚಾರಣೆ ಪೂರ್ಣಗೊಳ್ಳಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT