ಹಿನ್ನೋಟ 2021

ಹಿನ್ನೋಟ 2021: ಒಲಂಪಿಕ್ಸ್, ಪ್ಯಾರಾಲಂಪಿಕ್ಸ್, ಟೆನಿಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳ ಅಮೋಘ ಸಾಧನೆ

Vishwanath S

ಕೊರೋನಾದಿಂದ ಸ್ವಲ್ಪ ವಿರಾಮ ಸಿಕ್ಕಿದ್ದರಿಂದ 2021ರಲ್ಲಿ ಕ್ರೀಡಾ ಪ್ರಪಂಚದಲ್ಲಿ ಅನೇಕ ಪಂದ್ಯಾವಳಿಗಳು ನಡೆದಿದ್ದವು. ಇನ್ನು ಭಾರತ ಇದುವರೆಗಿನ ಅತ್ಯುತ್ತಮ ಪ್ರದರ್ಶನ ನೀಡಿದೆ. ಈ ವರ್ಷ ಭಾರತಕ್ಕೆ ಕ್ರೀಡಾ ಜಗತ್ತಿನಲ್ಲಿ ಹಲವು ಸುವರ್ಣ ಕ್ಷಣಗಳನ್ನು ನೀಡಿದೆ.

ಟೋಕಿಯೊ ಒಲಂಪಿಕ್ಸ್ ನ ಜಾವೆಲಿನ್ ಥ್ರೋನಲ್ಲಿ ಭಾರತದ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದು ದಾಖಲೆ ಬರೆದರು. ಫೈನಲ್ ನಲ್ಲಿ 87.58 ಮೀ ದೂರಕ್ಕೆ ಜಾವೆಲಿನ್ ಎಸೆದು ಅಗ್ರಸ್ಥಾನ ಪಡೆದರು. ಇನ್ನು ಕುಸ್ತಿಯಲ್ಲಿ ರವಿಕುಮಾರ್ ದಹಿಯಾ ಬೆಳ್ಳಿ, ವೇಟ್ ಲಿಫ್ಟಿಂಗ್ ನಲ್ಲಿ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದರು. ಬ್ಯಾಡ್ಮಿಂಟನ್ ನಲ್ಲಿ ಪಿವಿ ಸಿಂಧು ಕಂಚು, ಮಹಿಳಾ ಬಾಕ್ಸಿಂಗ್ ನಲ್ಲಿ ಲವ್ಲಿನಾ ಮತ್ತು ವೈಟ್ ಲಿಫ್ಟಿಂಗ್ ನಲ್ಲಿ ಬಜರಂಗ್ ಪುನಿಯಾ ಕಂಚಿನ ಪದಕ ಗೆದ್ದಿದ್ದಾರೆ.

ಭಾರತೀಯ ಪುರುಷರ ಹಾಕಿ ತಂಡ ಟೋಕಿಯೊ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಭಾರತದ ನಾಲ್ಕು ದಶಕಗಳ ಒಲಿಂಪಿಕ್ ಪದಕದ ಬರವನ್ನು ಕೊನೆಗೊಳಿಸಿತು. ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಭಾರತವು ಜರ್ಮನಿಯನ್ನು 5-4 ಗೋಲುಗಳಿಂದ ಸೋಲಿಸಿತ್ತು. ಇನ್ನು ಟೂರ್ನಿಯಲ್ಲಿ ಬೆಲ್ಜಿಯಂ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದು ಆಸ್ಟ್ರೇಲಿಯಾ ಬೆಳ್ಳಿಗೆ ತೃಪ್ತಿಪಟ್ಟುಕೊಂಡಿತು. 

ಇನ್ನು ಇದೇ ಟೂರ್ನಿಯಲ್ಲಿ ಭಾರತದ ಮಹಿಳಾ ಹಾಕಿ ತಂಡ ಸಹ ಸೆಮಿಫೈನಲ್ ಪ್ರವೇಶಿಸಿತ್ತು. ಆದರೆ ಅರ್ಜೇಂಟಿನಾ ವಿರುದ್ಧ ಸೋಲು ಕಂಡಿತ್ತು. ಇನ್ನು ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಗ್ರೇಟ್ ಬ್ರಿಟನ್ ವಿರುದ್ಧ ಸೋತು ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.

ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಕ್ರೀಡಾಪಟುಗಳು ಅದ್ಭುತ ಸಾಧನೆ ಮಾಡಿದ್ದಾರೆ. ಪ್ಯಾರಾಂಪಿಕ್ಸ್ ನಲ್ಲಿ ಭಾರತ ಮೊದಲ ಬಾರಿಗೆ 19 ಪದಕಗಳನ್ನು ಮುಡಿಗೇರಿಸಿಕೊಂಡಿತ್ತು. ಅದರಲ್ಲಿ ಐದು ಚಿನ್ನ, ಎಂಟು ಬೆಳ್ಳಿ ಮತ್ತು ಆರು ಕಂಚಿನ ಪದಕಗಳಿವೆ. ಮಹಿಳಾ ಶೂಟರ್ ಅವನಿ ಲಖೇರಾ. ಮಹಿಳಾ ಆಟಗಾರ್ತಿ ಭಾವಿನಾ ಪಟೇಲ್ ಟೇಬಲ್ ಟೆನಿಸ್‌ನಲ್ಲಿ ಮತ್ತು ಬಿಲ್ಲುಗಾರ ಹರ್ವಿಂದರ್ ಸಿಂಗ್ ಆರ್ಚರಿಯಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.

ವರ್ಷಾಂತ್ಯದಲ್ಲಿ ನಡೆದ ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಕಿಡಂಬಿ ಶ್ರೀಕಾಂತ್ ಬೆಳ್ಳಿ ಪದಕ ಗೆದ್ದು ಇತಿಹಾಸ ನಿರ್ಮಿಸಿದರು. ಇದಕ್ಕೂ ಮುನ್ನ ಪ್ರಕಾಶ್ ಪಡುಕೋಣೆ ಮತ್ತು ಬಿ. ಸಾಯಿ ಪ್ರಣೀತ್ ಈ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಕಂಚಿನ ಪದಕ ಗೆದ್ದು ಕೊಟ್ಟಿದ್ದರು. ಇದೇ ಟೂರ್ನಿಯಲ್ಲಿ ಲಕ್ಷ್ಯ ಸೇನ್ ಕಂಚಿನ ಪದಕವನ್ನು ಗೆಲ್ಲುವಲ್ಲಿ ಯಶಸ್ವಿಯಾದರು.

SCROLL FOR NEXT