ಖಾತ್ರಿಯಿಂದ ಕೃಷಿಗೆ ಕಾರ್ಮಿಕರ ಕೊರತೆ
ನವದೆಹಲಿ: ಗ್ರಾಮೀಣ ಪ್ರದೇಶದಲ್ಲಿ ದುಡಿಯುವ ಕೈಗಳಿಗೆ ಕೆಲಸ ನೀಡುವ ಮಹತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ)ಯಿಂದಾಗಿ ಕೃಷಿ ಮೇಲೆ ವ್ಯತಿರಿಕ್ತ ಪರಿಣಾಮಬೀಳುತ್ತಿದೆ.
ಕೃಷಿ ಕಾರ್ಮಿಕರ ಕೊರತೆಯಿಂದ ಭೂಮಾಲೀಕರು ಕಂಗಾಲಾಗಿದ್ದಾರೆ. ನರೇಗಾದಡಿ ಪ್ರತಿ ಕಾರ್ಮಿಕನಿಗೆ ದಿನಕ್ಕೆ 132 ಕೂಲಿ ನಿಗದಿಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬಹುತೇಕ ಕೃಷಿ ಕಾರ್ಮಿಕರು ಖಾತ್ರಿ ಯೋಜನೆಯಡಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಕೃಷಿ ಕೆಲಸ ಬಿಟ್ಟು ನಿರ್ಮಾಣ ಕಾರ್ಯಗಳಲ್ಲಿ ತೊಡಗಿ ಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೃಷಿ ಕಾರ್ಯಗಳಿಗೆ ಕಾರ್ಮಿಕರ ಕೊರತೆ ಎದುರಾಗುತ್ತಿದೆ.
2005ರಿಂದ 2010ರ ವರೆಗೆ ಸುಮಾರು 14 ದಶಲಕ್ಷ ಮಂದಿ ಕೃಷಿ ಕಾರ್ಯದಿಂದ ಹೊರ ಹೋಗಿದ್ದಾರೆ. ಇದಕ್ಕೆ 2006ರಲ್ಲಿ ಆರಂಭವಾದ ಖಾತ್ರಿಯೂ ಮುಖ್ಯ ಕಾರಣವಾಗಿದೆ. ಖಾತ್ರಿಯಿಂದಾಗಿ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಮಂದಿಗೆ ಉದ್ಯೋಗ ದೊರೆಯುತ್ತಿದೆ. ಇದರಿಂದಾಗಿ ಕೃಷಿ ಕಾರ್ಮಿಕರು ಹೆಚ್ಚಿನ ಕೂಲಿಗಾಗಿ ಭೂಮಾಲೀಕರ ಜತೆ ಚರ್ಚೆ ಮಾಡುತ್ತಿದ್ದಾರೆ. ಆಂಧ್ರದ ಗೋದಾವರಿ ಪ್ರದೇಶದಲ್ಲಿ ಬೇಡಿಕೆಯ ಅವಧಿಯಲ್ಲಿ ಕೃಷಿ ಕಾರ್ಮಿಕನೊಬ್ಬನಿಗೆ 400 ವರೆಗೆ ಕೂಲಿ ನೀಡಬೇಕಾದ ಪರಿಸ್ಥಿತಿ ಇದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.