ರಾಜಸ್ಥಾನದಲ್ಲಿ ಬಿಜೆಪಿಗೆ ವಸುಂಧರಾ ರಾಜೇ ನೇತೃತ್ವ
ಜೈಪುರ: ಮುಂಬರುವ ರಾಜಸ್ಥಾನ ವಿಧಾನಸಭೆ ಚುನಾವಣೆಯನ್ನು ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ನೇತೃತ್ವದಲ್ಲೇ ಎದುರಿಸಲು ಬಿಜೆಪಿ ನಿರ್ಧರಿಸಿದೆ.
ರಾಜೇ ಅವರು ರಾಜಸ್ಥಾನ ಬಿಜೆಪಿ ಘಟಕದ ನೂತನ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ. ಅವರ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸಲಾಗುವುದು ಎಂದು ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಶನಿವಾರ ಘೋಷಿಸಿದ್ದಾರೆ. ದೆಹಲಿಯಲ್ಲಿ ಶುಕ್ರವಾರ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ರಾಜೇ ಅವರ ನೇತೃತ್ವದಲ್ಲೇ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ತಾತ್ವಿಕ ಒಪ್ಪಿಗೆ ವ್ಯಕ್ತವಾಗಿತ್ತು. ರಾಜೇ 2003ರಿಂದ 08ರ ವರೆಗೆ ರಾಜಸ್ಥಾನ ಸಿಎಂ ಆಗಿ ಕಾರ್ಯನಿರ್ವಹಿಸಿದ್ದರು. ಆದರೆ, ಕಳೆದ ಚುನಾವಣೆ ಬಳಿಕ ಪಕ್ಷ ಅಧಿಕಾರ ಕಳೆದುಕೊಂಡಿತ್ತು. ಬಳಿಕ ಪಕ್ಷದ ಮುಖಂಡರು ತನ್ನನ್ನು ಮೂಲೆಗುಂಪು ಮಾಡುತ್ತಿದ್ದಾರೆಂದು ಆರೋಪಿಸಿ ರಾಜೇ ಬಿಜೆಪಿ ಹಿರಿಯ ಮುಖಂಡರ ಜತೆ ಮುನಿಸಿಕೊಂಡಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.