ಕುಂಭಮೇಳ: ಹೊಸ ಸಂಪ್ರದಾಯಕ್ಕೆ ನಾಂದಿ
ಅಲಹಾಬಾದ್: ನೂರಾರು ವರ್ಷಗಳ ಸಂಪ್ರದಾಯವನ್ನು ಮುರಿದು ಇದೇ ಮೊದಲ ಬಾರಿಗೆ ಮಲಹೊರುವ ಪದ್ಧತಿಯಿಂದ ವಿಮುಕ್ತರಾದ ನೂರು ಮಹಿಳೆಯರು ಕುಂಭಮೇಳದಲ್ಲಿ ತೀರ್ಥಸ್ನಾನ ಮಾಡಲಿದ್ದಾರೆ. ಈ ಮೂಲಕ ಕುಂಭಮೇಳದಲ್ಲಿ ಸಮಾನತೆಯ ತತ್ವಕ್ಕೆ ನಾಂದಿ ಹಾಡಲಿದ್ದಾರೆ. ರಾಜಸ್ಥಾನದ ಅನ್ವಾರ್ ಮತ್ತು ಟೋಂಕ್ ಜಿಲ್ಲೆಯ ಈವರೆಗೆ ಅಸ್ಪೃಶ್ಯರೆಂದೇ ಪರಿಗಣಿಸಲ್ಪಡುತ್ತಿದ್ದ ಮಹಿಳೆಯರು ಸಂಗಮದಲ್ಲಿ 7ರಂದು ಪವಿತ್ರ ಸ್ನಾನ ಮಾಡಲಿದ್ದಾರೆ. ಪೂಜಾಕೈಂಕರ್ಯಗಳಲ್ಲೂ ಪಾಲ್ಗೊಳ್ಳಲಿದ್ದಾರೆ ಎಂದು ಸಮಾಜಸೇವಕ ಬಿಂದೇಶ್ವರ್ ಪಾಠಕ್ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.