ಪ್ರಚೋದನಭಾಷಣ: ವರುಣ್ ನಿರಾಳ
ಪಿಲಿಭಿಟ್: ಪ್ರಚೋದಕಾರಿ ಭಾಷಣಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಬಿಜೆಪಿ ಮುಖಂಡ ವರುಣ್ ಗಾಂಧಿ ಅವರನ್ನು ಉತ್ತರಪ್ರದೇಶ ನ್ಯಾಯಾಲಯ ಬುಧವಾರ ದೋಷಮುಕ್ತಗೊಳಿಸಿದೆ. 2009ರ ಲೋಕಸಭಾ ಚುನಾವಣೆ ರ್ಯಾಲಿ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪವನ್ನು ವರುಣ್ ಗಾಂಧಿ ಎದುರಿಸುತ್ತಿದ್ದರು. ಈ ಸಂಬಂಧ ಗಾಂಧಿ ವಿರುದ್ಧ ಕೋತ್ವಾಲಿ ಮತ್ತು ಬರ್ಖೇರಾ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದ್ದವು. ಇದರಲ್ಲಿ ಕೋತ್ವಾಲಿ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ವರುಣ್ ಗಾಂಧಿ ಅವರು ದೋಷಮುಕ್ತಗೊಂಡಿದ್ದಾರೆ. ಆದರೆ, ಇನ್ನೊಂದು ಪ್ರಕರಣವು ಮಾ.1ರಂದು ವಿಚಾರಣೆಗೆ ಬರಲಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.