ಶಂಕಿತ ಉಗ್ರರಿಬ್ಬರ ಹಾಜರಿಗೆ ವಾರಂಟ್
ನವದೆಹಲಿ: ಹೈದರಾಬಾದ್ ಸ್ಫೋಟಕ್ಕೆ ಸಂಬಂಧಿಸಿ ಬಂಧಿಸಲಾಗಿರುವ ಶಂಕಿತ ಇಂಡಿಯನ್ ಮುಜಾಹಿದೀನ್ ಕಾರ್ಯಕರ್ತರಿಬ್ಬರನ್ನು ಕೋರ್ಟ್ಗೆ ಹಾಜರುಪಡಿಸುವಂತೆ ದೆಹಲಿ ನ್ಯಾಯಾಲಯ ಬುಧವಾರ ವಾರಂಟ್ ಹೊರಡಿಸಿದೆ. ತಿಹಾರ್ ಜೈಲಿನಲ್ಲಿರುವ ಸಯೀದ್ ಮಕ್ಬೂಲ್ ಮತ್ತು ಇಮ್ರಾನ್ ಖಾನ್ರನ್ನು ನ್ಯಾಯಾಲಯದ ಎದುರು ಹಾಜರುಪಡಿಸಲು ಫೆ.25ರಂದೂ ವಾರಂಟ್ ಹೊರಡಿಸಲಾಗಿತ್ತು. ಆದರೆ, ಜೈಲು ಅಧಿಕಾರಿಗಳು ಆ ಇಬ್ಬರು ಶಂಕಿತ ಉಗ್ರರನ್ನು ಕೋರ್ಟ್ಗೆ ಹಾಜರುಪಡಿಸುವಲ್ಲಿ ವಿಫಲವಾಗಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.