ಈಜಿಪ್ಟ್ನಲ್ಲಿ ಹಿಂಸಾಚಾರ: 22 ಮಂದಿ ಸಾವು
ಕೈರೋ: ಫುಟ್ಬಾಲ್ ಪಂದ್ಯಾವಳಿಯೊಂದರ ಬಳಿಕ ನಡೆದಿದ್ದ ದಂಗೆಗೆ ಸಂಬಂಧಿಸಿ ನ್ಯಾಯಾಲಯವು 21 ಮಂದಿಗೆ ಮರಣದಂಡನೆ ವಿಧಿಸಿದ ಹಿನ್ನೆಲೆಯಲ್ಲಿ ಈಜಿಪ್ಟ್ನಲ್ಲಿ ಶನಿವಾರ ಹಿಂಸಾಚಾರ ಭುಗಿಲೆದ್ದಿದೆ. ಘಟನೆಯಲ್ಲಿ 22 ಮಂದಿ ಮೃತಪಟ್ಟಿದ್ದು, 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕಳೆದ ಫೆಬ್ರವರಿಯಲ್ಲಿ ಫುಟ್ಬಾಲ್ ಪಂದ್ಯದ ಬಳಿಕ ನಡೆದ ಹಿಂಸಾಚಾರದಲ್ಲಿ 74 ಮಂದಿ ಮೃತರಾಗಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಲಯವು 21 ಫುಟ್ಬಾಲ್ ಪ್ರೇಮಿಗಳಿಗೆ ಮರಣದಂಡನೆ ವಿಧಿಸಿದೆ. ಈ ಕುರಿತ ಸುದ್ದಿ ಕೇಳಿ ಆಕ್ರೋಶಗೊಂಡ ಅಪರಾಧಿಗಳ ಕುಟುಂಬದವರ ಕಿವಿಗೆ ಬೀಳುತ್ತಿದ್ದಂತೆ ಅವರು ಜೈಲಿನ ಮೇಲೆ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಭದ್ರತಾ ಸಿಬ್ಬಂದಿ ಜತೆ ಭಾರಿ ಕಾಳಗ ನಡೆದಿದೆ. ಅಶ್ರುವಾಯು ಸಿಡಿಸಿ, ರಬ್ಬರ್ ಗುಂಡು ಹಾರಿಸಿ ಪ್ರತಿಭಟನಾಕಾರರ ನಿಯಂತ್ರಿಸಲು ಭದ್ರತಾ ಸಿಬ್ಬಂದಿ ಯತ್ನಿಸಿದ್ದಾರೆ. ಆದರೂ ಪರಿಸ್ಥಿತಿ ನಿಯಂತ್ರಕ್ಕೆ ಸಿಗದಾಗ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ್ದಾರೆ. ಈ ವೇಳೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ 20 ಮಂದಿ ಮೃತಪಟ್ಟರೆ, ಗುಂಪಿನ ನಡುವಿನಿಂದ ಹಾರಿಸಿದ ಗುಂಡಿಗೆ ಇಬ್ಬರು ಪೊಲೀಸ್ ಸಿಬ್ಬಂದಿ ಸಾವಿಗೀಡಾಗಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.