ವಾಕ್ ವಾರ್
ಸುಶೀಲ್ ಕುಮಾರ್ ಶಿಂಧೆ: ಬಿಜೆಪಿ ಹಾಗೂ ಆರ್ಎಸ್ಎಸ್ ದೇಶದಲ್ಲಿ ಭಯೋತ್ಪಾದನಾ ತರಬೇತಿ ಶಿಬಿರಗಳನ್ನು ನಡೆಸುತ್ತಿದೆ. ಇವುಗಳು ದೇಶದೆಲ್ಲೆಡೆ ಭಯೋತ್ಪಾದನೆಯನ್ನು ಹರಡುವ ಕೆಲಸ ಮಾಡುತ್ತಿವೆ.
ರಾಮಮಾಧವ್: ಕಾಂಗ್ರೆಸ್ ಮುಖಂಡರೊಬ್ಬರು ಇಂಥ ಹೇಳಿಕೆ ನೀಡಿದ್ದರೆ ತಲೆಕೆಡಿಸಿಕೊಳ್ಳಬೇಕಾಗಿರಲಿಲ್ಲ. ಆದರೆ, ಈ ರೀತಿಯ ಹೇಳಿಕೆ ನೀಡಿರುವುದು ಒಬ್ಬ ಗೃಹ ಸಚಿವ. ಇದರ ಹಿಂದೆಯೂ ವೋಟ್ ಬ್ಯಾಂಕ್ ರಾಜಕಾರಣ ಅಡಗಿದೆ.
ಬಿ.ಎಸ್. ಯಡಿಯೂರಪ್ಪ: ಬಹುಮತ ಇಲ್ಲದ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ಗೆ ಮಾನ ಮರ್ಯಾದೆ ಇದ್ದರೆ, ನೈತಿಕತೆ ಇದ್ದರೆ ತಕ್ಷಣವೇ ರಾಜಿನಾಮೆ ನೀಡಬೇಕು. ಇಲ್ಲದಿದ್ದರೆ ರಾಜ್ಯದ ಜನರೇ ಶೆಟ್ಟರ್ ಅವರಿಗೆ ಛೀಮಾರಿ ಹಾಕಬೇಕು.
ಜಗದೀಶ್ ಶೆಟ್ಟರ್: ಬಿಎಸ್ವೈ ಮಾಜಿ ಮುಖ್ಯಮಂತ್ರಿ ಆಗಿದ್ದವರು. ಕೀಳುಭಾಷೆ ಅವರ ಘನತೆಗೆ ಶೋಭೆ ತಾರದು. ಮಾಜಿ ಮುಖ್ಯಮಂತ್ರಿ ಆಗಿದ್ದುಕೊಂಡು ಮುಖ್ಯಮಂತ್ರಿಯವರೊಬ್ಬರಿಗೆ ಏಕವಚನದಲ್ಲಿ ಸಂಬೋಧಿಸುವುದು ಎಷ್ಟು ಸರಿ?
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.