ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಮತ್ತೆ ಸ್ಫೋಟಗೊಂಡ ತೆಲಂಗಾಣ

Parashurama
Updated On : 29 Jan 2013, 10:39 am

ಹೈದರಾಬಾದ್: ಪ್ರತ್ಯೇಕ ತೆಲಂಗಾಣ ರಾಜ್ಯ ಹೋರಾಟ ಸೋಮವಾರ ಮತ್ತಷ್ಟು ತೀವ್ರಗೊಂಡಿದೆ.
 ಕಾಂಗ್ರೆಸ್ ಮುಖಂಡರೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತ್ಯೇಕ ತೆಲಂಗಾಣ ರಚನೆ ಆಗದಿದ್ದರೆ ರಾಜಿನಾಮೆ ಸಲ್ಲಿಸುವುದಾಗಿ ತೆಲಂಗಾಣ ಪ್ರದೇಶದ ಏಳು ಕಾಂಗ್ರೆಸ್ ಸಂಸದರು ಕೇಂದ್ರ ಸರ್ಕಾರಕ್ಕೆ ಬೆದರಿಕೆ ಹಾಕಿದ್ದಾರೆ. ತಮ್ಮ ರಾಜಿನಾಮೆ ಪತ್ರವನ್ನು ಮಂಗಳವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕಳುಹಿಸಿಕೊಡುವುದಾಗಿ ತಿಳಿಸಿದ್ದಾರೆ.
ಇದಕ್ಕೂ ಮುನ್ನ ಹೈದರಾಬಾದ್‌ನ ಇಂದಿರಾಪಾರ್ಕ್‌ನಲ್ಲಿ ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಗಾಗಿ ಟಿಆರ್‌ಎಸ್ ನೇತೃತ್ವದಲ್ಲಿ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ಸಂಭವಿಸಿದೆ. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ಮುರಿದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವೇಳೆ, ಸ್ಥಳಕ್ಕೆ ಭೇಟಿ ನೀಡಿದ ಮೂವರು ಕಾಂಗ್ರೆಸ್ ಸಂಸದರಾದ ಪೊನ್ನಮ್ ಪ್ರಭಾಕರ್ ಮತ್ತು ಜಿ. ವಿನೋದ್ ಮತ್ತು ಪಕ್ಷದ ಹಿರಿಯ ಮುಖಂಡ ಕೆ. ಕೇಶವರಾವ್ ಅವರಿಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು ರಾಜಿನಾಮೆ ನೀಡುವಂತೆ ಒತ್ತಾಯಿಸಿದ್ದಾರೆ. ಆಗ ಕೆಲವು ಪ್ರತಿಭಟನಾಕಾರರು ಮುಖಂಡರ ಕಾರಿನ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ.

24 ಗಂಟೆಯಲ್ಲಿ ರಾಜ್ಯ ರಚನೆ
ಎನ್‌ಡಿಎ ಏನಾದರೂ ಅಧಿಕಾರಕ್ಕೆ ಬಂದಲ್ಲಿ ಸರ್ಕಾರ ರಚನೆಯಾದ 24 ಗಂಟೆಯೊಳಗೆ ಪ್ರತ್ಯೇಕ ತೆಲಂಗಾಣ ರಾಜ್ಯ ರಚಿಸಲಾಗುವುದು ಎಂದು ಬಿಜೆಪಿ ವಕ್ತಾರ ಮುಖ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ. ಈ ನಡುವೆ, ತೆಲಂಗಾಣ ರಾಜ್ಯ ರಚನೆಗೆ ಸಂಬಂಧಿಸಿ ಪ್ರಧಾನಿ ಮನಮೋಹನ ಸಿಂಗ್ ಹೇಳಿಕೆ ನೀಡಬೇಕೆಂದು ಬಿಜೆಪಿ ರಾಷ್ಟ್ರಾಧ್ಯಕ್ಷ ರಾಜನಾಥ್‌ಸಿಂಗ್ ಆಗ್ರಹಿಸಿದ್ದಾರೆ. ಪ್ರತ್ಯೇಕ ತೆಲಂಗಾಣ ರಾಜ್ಯ ಯಾವಾಗ ರಚನೆಯಾಗುತ್ತದೆ ಎನ್ನುವ ಕುರಿತು ಪ್ರಧಾನಿ ಸಿಂಗ್ ಹೇಳಿಕೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಚಿದು, ಶಿಂಧೆ ವಿರುದ್ಧ ಪ್ರಕರಣ ದಾಖಲಿಸಿ
ಹೇಳಿಕೆಗಳ ಮೂಲಕ ತೆಲಂಗಾಣದ ಜನರನ್ನು ವಂಚಿಸಿದ ಆರೋಪದ ಮೇಲೆ ಮಾಜಿ ಗೃಹ ಸಚಿವ ಪಿ.ಚಿದಂಬರಂ ಹಾಗೂ ಹಾಲಿ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ವಿರುದ್ಧ ಪ್ರಕರಣ ದಾಖಲಿಸುವಂತೆ ಸ್ಥಳೀಯ ನ್ಯಾಯಾಲಯವು ಪೊಲೀಸರಿಗೆ ಸೂಚಿಸಿದೆ. ಈ ಕುರಿತು ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ರಂಗಾರೆಡ್ಡಿ ಜಿಲ್ಲಾ ನ್ಯಾಯಾಲಯವು ಈ ಆದೇಶ ನೀಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments