ಶಿಕ್ಷಕರ ಶಿಕ್ಷಣ ಕಾರ್ಯಕ್ರಮ: ಸಭೆ
ನವದೆಹಲಿ: ಶಿಕ್ಷಕರ ಶಿಕ್ಷಣ ಸುಧಾರಣೆಗಾಗಿ ಸುಪ್ರೀಂಕೋರ್ಟ್ ನೇಮಿಸಿದ ಜ. ಜೆ.ಎಸ್. ವರ್ಮಾ ಸಮಿತಿ ಮಂಡಿಸಿದ ಶಿಫಾರಸುಗಳ ಕುರಿತು ಚರ್ಚಿಸಲು ಕೇಂದ್ರ ಸರ್ಕಾರವು ಮಂಗಳವಾರ ಎಲ್ಲಾ ರಾಜ್ಯಗಳ ಶಿಕ್ಷಣ ಇಲಾಖೆಗಳ ಸಭೆ ಕರೆದಿದೆ.
ತರಬೇತಿ ಸಂಸ್ಥೆಗಳಿಗೆ ಪ್ರವೇಶ ನೀಡುವ ಮೊದಲು ಅಭ್ಯರ್ಥಿಗಳಿಗೆ ಪೂರ್ವ ಪರೀಕ್ಷೆ ನಡೆಸುವ ಸಂಬಂಧ ವಿಸ್ತೃತ ಚರ್ಚೆಗಳು ನಡೆಯಲಿವೆ. ಜ. ಜೆ.ಎಸ್. ವರ್ಮಾ ಸಮಿತಿಯು ಕಳೆದ ಆಗಸ್ಟ್ನಲ್ಲಿ ತನ್ನ ವರದಿ ಸಲ್ಲಿಸಿತ್ತು. ಅದರಲ್ಲಿ ಉತ್ತಮ ಶಿಕ್ಷಕರನ್ನು ಸಿದ್ಧಪಡಿಸುವಲ್ಲಿ ಸರ್ಕಾರಗಳ ನಿರ್ಲಕ್ಷ್ಯ ಕುರಿತು ತೀವ್ರ ಬೇಸರ ವ್ಯಕ್ತಪಡಿಸಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.