ಉದ್ಧವ್, ರಾಜ್ ವಿರಸ ಶಮನ?
ಮುಂಬೈ: ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ ನಡುವಿನ ವೈಮನಸ್ಯ ದೂರವಾಗಲಿದೆಯೇ? ಎಮ್ಮೆನ್ನೆಸ್ ಮತ್ತು ಶಿವಸೇನೆ ಮೈತ್ರಿ ಮಾಡಿಕೊಳ್ಳಲಿವೆಯೇ?
ಮರಾಠಿ ಜನರ ಹಿತಾಸಕ್ತಿಯ ದೃಷ್ಟಿಯಿಂದ ಎಮ್ಮೆನ್ನೆಸ್ ಜತೆ ಮೈತ್ರಿ ಮಾಡಿಕೊಳ್ಳಲು ಸಿದ್ಧ ಎಂದು ಉದ್ಧವ್ ಠಾಕ್ರೆ ತಿಳಿಸಿರುವುದೇ ಈ ಅನುಮಾನ ಮೂಡಲು ಕಾರಣ. ನೀವಿಬ್ಬರೂ ಮತ್ತೆ ಮೈತ್ರಿ ಮಾಡಿಕೊಳ್ಳುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಉದ್ಧವ್, ಒಂದೇ ಕೈಯಿಂದ ಚಪ್ಪಾಳೆ ತಟ್ಟಲು ಸಾಧ್ಯವಿಲ್ಲ. ಯಾರಾದರೂ ಬಿಚ್ಚು ಮನಸ್ಸಿನಿಂದ ನನ್ನ ಬಳಿ ಬಂದರೆ ಖಂಡಿತಾ ಅವರನ್ನು ಸ್ವಾಗತಿಸುತ್ತೇನೆ ಎಂದಿದ್ದಾರೆ. 2006ರಲ್ಲಿ ರಾಜ್ ಠಾಕ್ರೆ ಶಿವಸೇನೆಯಿಂದ ಹೊರಹೋಗಿ ಎಮ್ಮೆನ್ನೆಸ್ ಸ್ಥಾಪಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.