ತೆಲಂಗಾಣ: ವಿದ್ಯಾರ್ಥಿ ಆತ್ಮಹತ್ಯೆ
ಹೈದರಾಬಾದ್: ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಗೆ ಆಗ್ರಹಿಸಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೂರನೇ ವರ್ಷದ ಬಿ.ಟೆಕ್ ವಿದ್ಯಾರ್ಥಿ ಎನ್. ದಿನೇಶ್ ಚಂದ್ರ ಆತ್ಮಹತ್ಯೆ ಮಾಡಿಕೊಂಡಾತ. ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿದ್ದ ಪತ್ರದಲ್ಲಿ ಆತ ಬಂದ್ ಕರೆ ನೀಡದೇ ರಾಜ್ಯ ರಚನೆ ಹೋರಾಟದಲ್ಲಿ ಯಶಸ್ಸು ಸಾಧಿಸುವಂತೆ ತೆಲಂಗಾಣ ರಾಷ್ಟ್ರ ಸಮಿತಿ ಅಧ್ಯಕ್ಷ ಕೆ. ಚಂದ್ರಶೇಖರ್ ರಾವ್ ಅವರಿಗೆ ಮನವಿ ಮಾಡಿದ್ದಾನೆ. ಈ ನಡುವೆ, ಕಾಂಗ್ರೆಸ್ ಕೂಡ ತಾನು ಪ್ರತ್ಯೇಕ ರಾಜ್ಯ ರಚನೆಗೆ ವಿರೋಧಿ ಅಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದೆ. ತೆಲಂಗಾಣ ರಾಜ್ಯ ರಚನೆ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಕಾಂಗ್ರೆಸ್ ವಕ್ತಾರ ಪಿ.ಸಿ. ಚಾಕೋ ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.