'ವಿನಿವಿಂಕ್' ಶಾಸ್ತ್ರಿ ಜಾಮೀನು ಅವಧಿ ವಿಸ್ತರಣೆ
ನವದೆಹಲಿ: ಕರ್ನಾಟಕದ ಸುಮಾರು 20000 ಗ್ರಾಹಕರಿಗೆ ವಿನಿವಿಂಕ್ ಸೌಹಾರ್ದ ಕೋ ಆಪ್ರೇಟಿವ್ ಸೊಸೈಟಿ ಮೂಲಕ 200 ಕೋಟಿ ವಂಚಿಸಿದ್ದ ಶ್ರೀನಿವಾಸ ಶಾಸ್ತ್ರಿಗೆ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ವಿಸ್ತರಿಸಿದೆ. ಬುಧವಾರ ವಿಚಾರಣೆ ನಡೆಸಿದ ನ್ಯಾ. ಕೆ.ಎಸ್.ರಾಧಕೃಷ್ಣನ್ ಮತ್ತು ನ್ಯಾ. ದೀಪಕ್ ಮಿಶ್ರಾ ಅವರಿದ್ದ ನ್ಯಾಯಪೀಠ ವಿಶೇಷ ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಒಂಬತ್ತು ತಿಂಗಳೊಳಗೆ ಪೂರ್ಣಗೊಳಿಸಬೇಕು ಎಂದು ಆದೇಶ ನೀಡಿದೆ. ವಂಚನೆಗೊಳಗಾದ ಠೇವಣಿದಾರರಿಗೆ ಹಣವನ್ನು ವಾಪಸು ಮಾಡುವಾಗ ಕರ್ನಾಟಕ ಹಣಕಾಸು ಸಂಸ್ಥೆ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ಅಧಿನಿಯಮ 2004 ಪಾಲಿಸಬೇಕು ಎಂದು ನ್ಯಾಪೀಠ ಸೂಚಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.