ಕುರಿಯನ್ ಮರುತನಿಖೆಗೆ ಕೋರಿದ್ದ ಅರ್ಜಿ ವಜಾ
ಇಡುಕ್ಕಿ: ಸೂರ್ಯನೆಲ್ಲಿ ಗ್ಯಾಂಗ್ರೇಪ್ ಪ್ರಕರಣ ಸಂಬಂಧ ರಾಜ್ಯಸಭೆ ಉಪಸಭಾಪತಿ ಪಿ.ಜೆ. ಕುರಿಯನ್ ಅವರಿಗೆ ಸ್ವಲ್ಪ ಮಟ್ಟಿಗೆ ನೆಮ್ಮದಿ ದೊರಕಿದೆ. ಪ್ರಕರಣದಲ್ಲಿ ಕುರಿಯನ್ ಪಾತ್ರದ ಬಗ್ಗೆ ಮರುತನಿಖೆ ನಡೆಸುವಂತೆ ಕೋರಿ ಅತ್ಯಾಚಾರಕ್ಕೊಳಗಾದಾಕೆ ಸಲ್ಲಿಸಿದ್ದ ಅರ್ಜಿಯನ್ನು ಇಡುಕ್ಕಿಯ ಕೋರ್ಟ್ ತಿರಸ್ಕರಿಸಿದೆ. ಅರ್ಜಿಯಲ್ಲಿ ಎತ್ತಲಾದ ಅಂಶಗಳ ಬಗ್ಗೆ ಈಗಾಗಲೇ ತನಿಖೆ ನಡೆದಿದ್ದು, ಯಾವ ಸಾಕ್ಷ್ಯಾಧಾರ ಸಿಕ್ಕಿಲ್ಲ ಎಂದು ಕೋರ್ಟ್ ಹೇಳಿದೆ. ರೇಪ್ನಲ್ಲಿ ಕುರಿಯನ್ ಪಾತ್ರವೂ ಇದೆ ಎಂಬ ಪ್ರಕರಣದ ಅಪರಾಧಿ ಧರ್ಮರಾಜನ್ ಹೇಳಿಕೆಯ ಆಧಾರದಲ್ಲಿ ಅತ್ಯಾಚಾರಕ್ಕೊಳಗಾದಾಕೆ ಈ ಅರ್ಜಿಯನ್ನು ಸಲ್ಲಿಸಿದ್ದಳು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.