ಬಾಲಕಿ ಮೇಲೆ ರೇಪ್: ಐವರ ಅಮಾನತು
ನವದೆಹಲಿ: ದೆಹಲಿಯ ಮಂಗೋಲ್ಪುರಿಯ ಮುನ್ಸಿಪಲ್ ಶಾಳೆಯಲ್ಲಿ ಏಳು ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ಪೊಲೀಸರು ಶೀಘ್ರದಲ್ಲೇ ಭೇದಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅಲ್ಲದೆ, ಪ್ರಕರಣದಲ್ಲಿ ಯಾವುದೇ ಹೊರಗಿನ ವ್ಯಕ್ತಿಯ ಕೈವಾಡವನ್ನು ಅವರು ನಿರಾಕರಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಶಾಲೆಯ ಪ್ರಾಂಶುಪಾಲ ಮತ್ತು ಇತರೆ ನಾಲ್ಕು ಮಂದಿಯನ್ನು ಅಮಾನತು ಮಾಡಲಾಗಿದೆ. ಇದಕ್ಕೂ ಮುನ್ನ 15 ಮಂದಿ ಶಿಕ್ಷಕರನ್ನು ವಿಚಾರಣೆ ನಡೆಸಲಾಗಿತ್ತು. ಈ ನಡುವೆ, ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಕೂಡ ಘಟನೆ ಕುರಿತು ತನಿಖೆಗೆ ನಾಲ್ಕು ಮಂದಿ ಸದಸ್ಯರ ವಿಚಾರಣಾ ಸಮಿತಿಯೊಂದನ್ನು ರಚಿಸಿದೆ. ಘಟನೆಗೆ ಸಂಬಂಧಿಸಿ ಈವರೆಗೆ ಯಾರನ್ನೂ ಬಂಧಿಸಲಾಗಿಲ್ಲ.
ಇದೇ ವೇಳೆ, ಅತ್ಯಾಚಾರವನ್ನು ಖಂಡಿಸಿ ಶನಿವಾರ ಕೂಡ ದೆಹಲಿಯಲ್ಲಿ ಸ್ಥಳೀಯರ ಪ್ರತಿಭಟನೆ ಮುಂದುವರಿದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.