ದೆಹಲಿ ರೇಪ್: ಬಾಲಕಿ ನೆರವಿಂದ ಆರೋಪಿಯ ರೇಖಾಚಿತ್ರ ಸಿದ್ಧ
ನವದೆಹಲಿ: ಎಂಸಿಡಿ ಶಾಲೆಯಲ್ಲಿ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದು 3 ದಿನಗಳ ಬಳಿಕ ಭಾನುವಾರ ಪೊಲೀಸರು ಆರೋಪಿಯ ರೇಖಾಚಿತ್ರವನ್ನು ಸಿದ್ಧಪಡಿಸಿದ್ದಾರೆ. ಬಾಲಕಿಯ ನೆರವಿನಿಂದ ರೇಖಾಚಿತ್ರ ರಚಿಸಲಾಗಿದೆ. ಇದೇ ವೇಳೆ, ಘಟನೆಗೂ ಮುನ್ನ ಆರೋಪಿಯನ್ನು ತಾನು ಶಾಲೆಯಲ್ಲಿ ನೋಡಿಲ್ಲ ಎಂದು ಬಾಲಕಿ ತಿಳಿಸಿದ್ದಾರೆ. ಫೆ.27ರಂದು ಮಧ್ಯಾಹ್ನದ ಊಟದ ಸಮಯದಲ್ಲಿ ಯಾರ್ಯಾರೆಲ್ಲ ಶಾಲೆಗೆ ಬಂದಿದ್ದರು ಎಂಬ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯ ಬಗ್ಗೆ ಪ್ರಮುಖ ಸುಳಿವು ದೊರೆತಿದೆ ಎಂದೂ ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.