ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಬರ: ನೀರಿಗಾಗಿ ಕರ್ನಾಟಕದ ಮೊರೆ ಹೋದ ಮಹಾರಾಷ್ಟ್ರ

Parashurama
Updated On : 3 Mar 2013, 10:20 am

ಸೋಲಾಪುರ: ನೀರಿಗಾಗಿ ಮಹಾರಾಷ್ಟ್ರ ಈಗ ಕರ್ನಾಟಕದ ಬಾಗಿಲು ತಟ್ಟುತ್ತಿದೆ. ಮಹಾರಾಷ್ಟ್ರದಲ್ಲಿ ಬರದ ತೀವ್ರತೆ ಹೆಚ್ಚಾಗಿದ್ದು, ಆಲಮಟ್ಟಿ ಜಲಾಶಯದಿಂದ ಇಂಡಿ ಕಾಲುವೆ ಮೂಲಕ ನೀರು ಒದಗಿಸುವಂತೆ ಕರ್ನಾಟಕ ಸರ್ಕಾರವನ್ನು ಕೋರಲಾಗುತ್ತಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾಣ್ ತಿಳಿಸಿದ್ದಾರೆ.
 ರಾಜ್ಯದ ಬರ ಪರಿಸ್ಥಿತಿಯು 1972ರ ಬರಗಾಲಕ್ಕಿಂತಲೂ ತೀವ್ರ ಸ್ವರೂಪ ಪಡೆದುಕೊಂಡಿದೆ. ಮಹಾರಾಷ್ಟ್ರ-ಕರ್ನಾಟಕ ಗಡಿಯಲ್ಲಿ ಬರುವ ಜಿಲ್ಲೆಗಳು ಅತೀವ ನೀರಿನ ಸಮಸ್ಯೆ ಎದುರಿಸುತ್ತಿವೆ. ಹಾಗಾಗಿ ಆಲಮಟ್ಟಿಯಿಂದ  ನೀರು ಪಡೆದುಕೊಳ್ಳುವ ಬಗ್ಗೆ ಕರ್ನಾಟಕ ಸರ್ಕಾರದೊಂದಿಗೆ ಮಾತುಕತೆ ನಡೆಯುತ್ತಿದೆ. ಇಂಡಿ ಕಾಲುವೆಯಿಂದ ಚಡಚಣ ಬಳಿ ಭೀಮಾ ನದಿಗೆ ನೀರು ಹರಿಸುವಂತೆ ಒತ್ತಾಯಿಸುತ್ತಿದ್ದೇವೆ ಎಂದೂ ಚೌಹಾಣ್ ಹೇಳಿದ್ದಾರೆ.
 ಮಹಾರಾಷ್ಟ್ರ ಜಲ ಸರಬರಾಜು ಸಚಿವ ಲಕ್ಷ್ಮಣರಾವ್ ಧೋಬಲೆ ಅವರು ಈಗಾಗಲೇ ಒಂದು ಸುತ್ತಿನ ಮಾತುಕತೆ ಮುಗಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ 2ನೇ ಸುತ್ತಿನ ಮಾತುಕತೆಯು ಸೋಮವಾರ ಪುಣೆಯಲ್ಲಿ ನಡೆಯಲಿದೆ ಎಂದೂ ಅವರು ತಿಳಿಸಿದ್ದಾರೆ.
 ಇದೇ ವೇಳೆ, ಬರಪರಿಸ್ಥಿತಿಯನ್ನು ರಾಜಕೀಯ ಉದ್ದೇಶಕ್ಕಾಗಿ ಬಳಸಿಕೊಳ್ಳುತ್ತಿರುವ ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ವಿರುದ್ಧ ಚೌಹಾಣ್ ಕಿಡಿಕಾರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments