ಮೋದಿಗೆ ಕೊಟ್ಟ ಆಹ್ವಾನ ರದ್ದು
ನವದಹೆಲಿ: ಈ ತಿಂಗಳ 23ರಂದು ಪೆನ್ಸಿಲ್ವೇನಿಯಾ ವಿವಿಯ ವಾರ್ಟನ್ ಸ್ಕೂಲ್ನಲ್ಲಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಮಾಡಬೇಕಾಗಿದ್ದ ಭಾಷಣ ರದ್ದಾಗಿದೆ. ಮೋದಿಯವರಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಲು ಆಹ್ವಾನಿಸಿದ್ದಕ್ಕೆ ಟೀಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ವಿವಿ ಭಾನುವಾರ ಮೋದಿಯವರಿಗೆ ನೀಡಿದ್ದ ಆಹ್ವಾನವನ್ನು ರದ್ದುಮಾಡಿದೆ. ಈ ಬಗ್ಗೆ ಹೇಳಿಕೆ ನೀಡಿದ ವಾರ್ಟನ್ ಇಂಡಿಯಾ ಇಕನಾಮಿಕ್ ಫೋರಂ 'ನಾವು ಯಾವುದೇ ರಾಜಕೀಯ ಅಭಿಮತ ಅಥವಾ ಇತರ ಸಿದ್ಧಾಂತವನ್ನು ಬೆಂಬಲಿಸುವುದಿಲ್ಲ. ನಮ್ಮ ತಂಡದ ಗುರಿ ಏನಿದ್ದರೂ ಭಾರತದ ಅಭಿವೃದ್ಧಿ ವೇಗದ ಬಗ್ಗೆ ಮಾತ್ರ ಚರ್ಚೆ ಮಾಡಲು ಇಚ್ಛಿಸುತ್ತೇವೆ' ಎಂದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.