ವೇಶ್ಯಾವಾಟಿಕೆ: 7 ಮಂದಿ ಬಂಧನ
ನವದೆಹಲಿ: ದೆಹಲಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಕರ್ನಾಟಕದ ಮಹಿಳೆಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ7 ಮಂದಿಯ ಗ್ಯಾಂಗ್ ಅನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ. ಮಹಿಳೆಯೊಬ್ಬಳನ್ನು ಮರುಳು ಮಾಡಿ ದೆಹಲಿಗೆ ಕರೆಸಿಕೊಂಡಿದ್ದ ಝಾಕಿರ್ ಎಂಬಾತ ಆಕೆಯ ಮೇಲೆ ಅತ್ಯಾಚಾರವನ್ನೂ ಎಸಗಿದ್ದ. ಆಕೆ ಹೇಗೋ ಅಲ್ಲಿಂದ ತಪ್ಪಿಸಿಕೊಂಡು ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ ಗ್ಯಾಂಗ್ ಸದಸ್ಯರನ್ನು ಬಂಧಿಸಲು ಸಾಧ್ಯವಾಯಿತು. ದೆಹಲಿ ಮತ್ತು ಬೆಂಗಳೂರಿನಿಂದ ಕಾರ್ಯಾಚರಿಸುವ ಈ ಗ್ಯಾಂಗ್ ಅನೇಕ ಮಹಿಳೆಯರನ್ನು ವೇಶ್ಯಾವಾಟಿಕೆಗೆ ತಳ್ಳುವ ಕೆಲಸ ಮಾಡುತ್ತಿದೆ. ಇವರಲ್ಲಿ ಮೂವರನ್ನು ದೆಹಲಿಯಲ್ಲಿ ಬಂಧಿಸಲಾಗಿದ್ದು, ನಾಲ್ವರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಝಾಕಿರ್-ಗೀತಾ ದಂಪತಿ, ಸಕೀನಾ, ಗುಲ್ಸನಮ್, ರೇಷ್ಮಾ, ಸೈನಾ ಮತ್ತು ಲಕ್ಷ್ಮಿಪತಿ ಬಂಧಿತರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.