ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಹಿಂಸಾಚಾರದ ನಡುವೆಯೇ ಪ್ರಣಬ್ ಬಾಂಗ್ಲಾ ಪ್ರವಾಸ

Parashurama
Updated On : 3 Mar 2013, 10:23 am

ಢಾಕಾ: ಬಾಂಗ್ಲಾದೇಶದಲ್ಲಿ ಗಲಭೆ ಭುಗಿಲೆದ್ದಿರುವ ನಡುವೆಯೇ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಲ್ಲಿ ತಮ್ಮ ಪ್ರವಾಸ ಆರಂಭಿಸಿದ್ದಾರೆ. ಭಾನುವಾರ ಪ್ರಣಬ್ ಢಾಕಾಗೆ ಆಗಮಿಸಿದ್ದು, ಅವರನ್ನು ಭಾರಿ ಗೌರವದಿಂದ ಬರಮಾಡಿಕೊಳ್ಳಲಾಯಿತು. ಆದರೆ, ಬಾಂಗ್ಲಾದ ಇಸ್ಲಾಮಿಕ್ ನಾಯಕರೊಬ್ಬರಿಗೆ ಗಲ್ಲುಶಿಕ್ಷೆ ವಿಧಿಸಿರುವುದನ್ನು ಖಂಡಿಸಿ ಕಳೆದ ಕೆಲ ದಿನಗಳಿಂದ ಅಲ್ಲಿ ಹಿಂಸಾಚಾರ ಆರಂಭವಾಗಿದ್ದು, ಈವರೆಗೆ 75 ಮಂದಿ ಬಲಿಯಾಗಿದ್ದಾರೆ. ಹೀಗಾಗಿ ಪ್ರಣಬ್ ಪ್ರವಾಸದ ಮೇಲೆ ಕರಿನೆರಳು ಬಿದ್ದಿದೆ. ಹಿಂಸಾಚಾರದ ಹಿನ್ನೆಲೆಯಲ್ಲಿ ಬಾಂಗ್ಲಾ ಪ್ರತಿಪಕ್ಷ ನಾಯಕಿ ಖಾಲಿದಾ ಝಿಯಾ ಅವರು ಪ್ರಣಬ್ ಜತೆಗಿನ ಮಾತುಕತೆಯನ್ನು ರದ್ದುಗೊಳಿಸಿದ್ದಾರೆ. ಭಾರತ ಹಾಗೂ ಬಾಂಗ್ಲಾ ನಡುವೆ ಪರಿಹಾರವಾಗದೇ ಉಳಿದಿರುವ ಸಮಸ್ಯೆಗಳನ್ನು ಇತ್ಯರ್ಥಗೊಳಿಸುವ ಸಲುವಾಗಿ ಪ್ರಣಬ್ 3 ದಿನಗಳ ಪ್ರವಾಸ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments