ಅತ್ಯಾಚಾರ ತಡೆ ಮಸೂದೆಗೆ ಅಸ್ತು
ನವದೆಹಲಿ: ಅತ್ಯಾಚಾರ ತಡೆ ತಿದ್ದುಪಡಿ ಮಸೂದೆಗೆ ರಾಜ್ಯಸಭೆ ಅಂಗೀಕಾರ ನೀಡಿದೆ. ಗೃಹ ಸಚಿವ ಶಿಂದೆ ಅವರು ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಿದರು. ಇದಕ್ಕೆ ರಾಜ್ಯಸಭೆ ಒಪ್ಪಿಗೆ ನೀಡಿತು. ಬಳಿಕ ಮಾತನಾಡಿದ ಶಿಂದೆ, ಮಹಿಳೆಯರ ಮೇಲಿನ ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಮಸೂದೆ ಅಗತ್ಯವಿದೆ. ಹೀಗಾಗಿ ಸದನ ಒಪ್ಪಿಗೆ ನೀಡಬೇಕು ಎಂದು ಮನವಿ ಮಾಡಿದರು. ಇದಕ್ಕೂ ಮುನ್ನ ನಡೆದ ಚರ್ಚೆಯಲ್ಲಿ ಎಸ್ಪಿ ಸದಸ್ಯೆ ಜಯಾ ಬಚ್ಚನ್ ಅವರು ಮಸೂದೆಯಲ್ಲಿನ ಲೋಪದೋಷಗಳ ಬಗ್ಗೆ ಮಾತನಾಡಿದರು. ಇದು ಕೇವಲ ಕಣ್ಣೊರೆಸುವ ತಂತ್ರ ಎಂದು ಹೇಳಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.