ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕೈ ಅಭ್ಯರ್ಥಿ ಆಯ್ಕೆಗೆ ಹೊಸ ವ್ಯವಸ್ಥೆ

Parashurama
Updated On : 21 Mar 2013, 9:13 am

ನವದೆಹಲಿ: 2014ರ ಲೋಕಸಭೆ ಚುನಾವಣೆಗೆ ಎಲ್ಲ ರೀತಿಯ ಕಸರತ್ತುಗಳೂ ಆರಂಭವಾಗತೊಡಗಿದೆ. ಅದರಲ್ಲೂ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಈ ಬಾರಿ ಅಭ್ಯರ್ಥಿಗಳ ಆಯ್ಕೆಗೆ ಹೊಸ ವ್ಯವಸ್ಥೆ ಜಾರಿಗೆ ತಂದಿದ್ದಾರೆ. 4 ಹಂತದ ಪ್ರಕ್ರಿಯೆ ಮೂಲಕ ಅಭ್ಯರ್ಥಿ ಆಯ್ಕೆ ಮಾಡುವ ಯೋಜನೆಯನ್ನು ರಾಹುಲ್ ಆರಂಭಿಸಿದ್ದಾರೆ.
ಏನಿದು ಹೊಸ ವ್ಯವಸ್ಥೆ?: 544ರಲ್ಲಿ ಪ್ರತಿಯೊಂದು ಕ್ಷೇತ್ರದ ಅಭ್ಯರ್ಥಿಯ ಆಯ್ಕೆಗೂ ಈ ಮಾನದಂಡವನ್ನು ಬಳಸುವುದು ಚುನಾವಣಾ ಸಮನ್ವಯ ಸಮಿತಿಯ ಅಧ್ಯಕ್ಷರೂ ಆಗಿರುವ ರಾಹುಲ್ ಅವರ ನಿರ್ಧಾರ. ಅದರಂತೆ, ಬಹು-ಹಂತದ ಸಮಾಲೋಚನೆ, ಫೀಡ್‌ಬ್ಯಾಕ್, ಗೆಲವು ಸಾಧಿಸುವ ಸಾಧ್ಯತೆಯಿರುವ ಅಭ್ಯರ್ಥಿಗಳ ಪಟ್ಟಿ ಹೀಗೆ ಪ್ರತಿ ಕ್ಷೇತ್ರದಲ್ಲೂ ಅಭ್ಯರ್ಥಿ ಆಯ್ಕೆಗೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಭ್ಯರ್ಥಿಗಳ ಆಯ್ಕೆಗೆ ಇಂತಹುದೊಂದು ವಿಸ್ತೃತ ಕ್ರಮ ಕೈಗೊಳ್ಳುತ್ತಿರುವುದು ಇದೇ ಮೊದಲು ಎನ್ನಲಾಗಿದೆ.
54 ವೀಕ್ಷಕರು: ಇದಕ್ಕಾಗಿ ಕಳೆದ ವರ್ಷದ ಅಕ್ಟೋಬರ್‌ನಲ್ಲಿ ರಾಹುಲ್ ಅವರು 54 ಮಂದಿ ವೀಕ್ಷಕರನ್ನು ಆಯ್ಕೆ ಮಾಡಿದ್ದಾರೆ. ಈ ವೀಕ್ಷಕರು ಪ್ರತಿಯೊಂದು ಕ್ಷೇತ್ರಕ್ಕೂ ತೆರಳಿ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಸ್ಥಳೀಯ ಪ್ರಭಾವ ತಡೆಯುವ ನಿಟ್ಟಿನಲ್ಲಿ ಹೊರರಾಜ್ಯದ ವೀಕ್ಷಕರನ್ನೇ ನೇಮಿಸಲಾಗಿತ್ತು. ಪ್ರತಿಯೊಬ್ಬರಿಗೂ ತಲಾ 10 ಕ್ಷೇತ್ರಗಳನ್ನು ನೀಡಲಾಗಿತ್ತು. ಅಲ್ಲಿಗೆ ತೆರಳಿ ಅವರು ಜನಸಾಮಾನ್ಯರು, ವೃತ್ತಿಪರರು, ಎನ್‌ಜಿಓಗಳು ಹೀಗೆ ಎಲ್ಲರೊಂದಿಗೂ ಮಾತನಾಡಿ, ಉತ್ತಮ ಅಭ್ಯರ್ಥಿಗಳ ಹೆಸರನ್ನು ಪಟ್ಟಿ ಮಾಡಿದ್ದಾರೆ. ಈ ಕೆಲಸವನ್ನು ವೀಕ್ಷಕರು ಪೂರ್ಣಗೊಳಿಸಿದ್ದು ವರದಿಯನ್ನೂ ಕೆಲ ದಿನಗಳ ಹಿಂದಷ್ಟೇ ಒದಗಿಸಿದ್ದಾರೆ ಎನ್ನಲಾಗಿದೆ.
ಅಂತಿಮ ಪಟ್ಟಿ: ಇದೇ ವೇಳೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ್ ಮಿಸ್ತ್ರಿ ಅವರೂ ವಿವಿಧ ರಾಜ್ಯಗಳಿಗೆ ಭೇಟಿ ನೀಡಿ ಅಲ್ಲಿನ ನಾಯಕರ ಜತೆ ಮಾತುಕತೆ ನಡೆಸಿ ಹೆಚ್ಚುವರಿ ಮಾಹಿತಿಯನ್ನೂ ಸಂಗ್ರಹಿಸಿದ್ದಾರೆ. ಅಷ್ಟೇ ಅಲ್ಲ, ವಿಜೇತರಾಗಬಲ್ಲ ಅಭ್ಯರ್ಥಿಗಳ ಬಗ್ಗೆ ಸ್ವತಂತ್ರ ಸರ್ವೇ ನಡೆಸಲು ವೃತ್ತಿಪರ ಏಜೆನ್ಸಿಗಳಿಗೆ ಸೂಚಿಸಲಾಗಿದೆ. ಏಜೆನ್ಸಿಗಳ ಹಾಗೂ ವೀಕ್ಷಕರ ವರದಿಯ ಆಧಾರದ ಮೇಲೆ ಅಭ್ಯರ್ಥಿಗಳ ಕರಡು ಪಟ್ಟಿ ತಯಾರಿಸಲಾಗುತ್ತದೆ. ಸ್ಕ್ರೀನಿಂಗ್ ಸಮಿತಿ ಸದಸ್ಯರು ಪ್ರತಿಯೊಂದು ಕ್ಷೇತ್ರದ ಉತ್ತಮ ಅಭ್ಯರ್ಥಿಯ ಹೆಸರನ್ನು ಟಿಕ್ ಮಾಡುತ್ತಾರೆ. ನಂತರ ರಾಹುಲ್ ಗಾಂಧಿ ಹಾಗೂ ಸೋನಿಯಾ ಅವರ ಅಂಗೀಕಾರ ಪಡೆಯುತ್ತಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments