ಬಂಧಿತ ಲಿಯಾಖತ್ ನಿಜಕ್ಕೂ ಮುಗ್ಧನೇ?
ನವದೆಹಲಿ: ಹೋಳಿ ಹಬ್ಬದಂದು ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ರೂಪಿಸಿದ್ದಾನೆ ಎಂಬ ಆರೋಪದಲ್ಲಿ ದೆಹಲಿ ಪೊಲೀಸರಿಂದ ಬಂಧಿತನಾದ ಲಿಯಾಖತ್ ಷಾ ನಿಜಕ್ಕೂ ಮುಗ್ಧನೇ? ಹಾಗಾದರೆ, ಅತಿಥಿ ಗೃಹದಲ್ಲಿ ಸ್ಫೋಟಕ ವಶಪಡಿಸಿಕೊಂಡಿರುವುದು ಕಟ್ಟುಕಥೆಯೇ?
ಲಿಯಾಖತ್ ಉಗ್ರ ದಾಳಿಗೆ ಬೇಕಾದ ಶಸ್ತ್ರಾಸ್ತ್ರ ಸಂಗ್ರಹದ ಜವಾಬ್ದಾರಿ ಹೊತ್ತುಕೊಂಡಿದ್ದ. ಆತನನ್ನು ಉತ್ತರಪ್ರದೇಶದ ಗೋರಖ್ಪುರದಲ್ಲಿ ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಹೇಳಿದ್ದರು. ಆದರೆ, ಜಮ್ಮು ಮತ್ತು ಕಾಶ್ಮೀರದ ಅಧಿಕಾರಿಗಳು ಹೇಳುವ ಪ್ರಕಾರ, ಲಿಯಾಖತ್ ಹಾಗೂ ಅಶ್ರಫ್ ಮಿರ್ ಎಂಬುವವರು 90ರ ದಶಕದಲ್ಲಿ ಪಾಕ್ಗೆ ತೆರಳಿದ್ದರು.
ಹೀಗೆ ತೆರಳಿದವರಲ್ಲಿ ಯಾರು ಹಿಂಸೆ ತ್ಯಜಿಸಿ ಮರಳಲು ಸಿದ್ಧರಿದ್ದಾರೆಯೋ ಅವರಿಗೆ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಪುನರ್ವಸತಿ ಕಲ್ಪಿಸುವ ಯೋಜನೆ ರೂಪಿಸಿದೆ. ಇವರಿಬ್ಬರು ಯಾವುದೇ ಉಗ್ರ ದಾಳಿಗಳಲ್ಲಿ ಭಾಗವಹಿಸಿಲ್ಲ ಎಂಬುದು ಖಾತ್ರಿಯಾದ ಹಿನ್ನೆಲೆಯಲ್ಲಿ ಭಾರತಕ್ಕೆ ಮರಳಲು ಅವಕಾಶ ಕಲ್ಪಿಸಲಾಗಿತ್ತು. ಹಾಗಾಗಿ ಶರಣಾಗಲೆಂದು ತಮ್ಮ ಕುಟುಂಬ ಸದಸ್ಯರ ಜತೆ ಲಿಯಾಖತ್ ಮತ್ತು ಮಿರ್ ಆಗಮಿಸಿದ್ದರು. ಆದರೆ, ದೆಹಲಿ ಪೊಲೀಸರು ಅನಗತ್ಯವಾಗಿ ಇವರನ್ನು ಬಂಧಿಸಿದ್ದಾರೆ ಎನ್ನುವುದು ಅಧಿಕಾರಿಗಳ ಆರೋಪ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.