ಮುಲಾಯಂ ವಿರುದ್ಧ ಮತ್ತೆ ಬೇಣಿ ವಾಗ್ದಾಳಿ
ನವದೆಹಲಿ: ಕೇಂದ್ರ ಉಕ್ಕು ಸಚಿವ ಬೇಣಿ ಪ್ರಸಾದ್ ವರ್ಮಾ ಮತ್ತೆ ಎಸ್ಪಿ ಮುಖಂಡ ಮುಲಾಯಂ ಸಿಂಗ್ ಯಾದವ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಲಾಯಂ ಸಿಂಗ್ ನಿಜವಾದ ಸಮಾಜವಾದಿ ಆಗಲು ಸಾಧ್ಯವೇ ಇಲ್ಲ ಎಂದು ಆರೋಪಿಸಿದ್ದಾರೆ. ಜವಾಹರಲಾಲ್ ನೆಹರೂ ಹಾಗೂ ಇಂದಿರಾಗಾಂಧಿ ನಿಜವಾದ ಸಮಾಜವಾದಿಗಳು. ಮುಲಾಯಂ ಸಿಂಗ್ ಕೇವಲ ತಮ್ಮ ಕುಟುಂಬದ ಹಿತಾಸಕ್ತಿ ಕಾಯ್ದುಕೊಳ್ಳುವುದರಲ್ಲೇ ಬ್ಯುಸಿಯಾಗಿದ್ದಾರೆ. ಹಾಗಾಗಿ ಅವರು ನಿಜವಾದ ಸಮಾಜವಾದಿ ಆಗಲು ಸಾಧ್ಯವೇ ಇಲ್ಲ ಎಂದು ಬೇಣಿ ದೂರಿದ್ದಾರೆ. ಕಳೆದ ವಾರವಷ್ಟೇ ಮುಲಾಯಂ ಸಿಂಗ್ರಿಗೆ ಉಗ್ರಗಾಮಿಗಳೊಂದಿಗೆ ಸಂಬಂಧ ಇದೆ ಎನ್ನುವ ಹೇಳಿಕೆ ನೀಡಿ ಬೇಣಿ ವಿವಾದ ಸೃಷ್ಟಿಸಿದ್ದರು. ಇದಾದ ಬಳಿಕ ತಮ್ಮ ಹೇಳಿಕೆಗೆ ಬಲವಂತವಾಗಿ ವಿಷಾದ ವ್ಯಕ್ತಪಡಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.