ಜೈಬುನ್ನೀಸಾಗೂ ಕ್ಷಮೆಕೊಡಿ: ನ್ಯಾ.ಕಾಟ್ಜು
ನವದೆಹಲಿ: 1993ರ ಮುಂಬೈ ಸರಣಿ ಸ್ಫೋಟದಲ್ಲಿ ಶಿಕ್ಷೆಗೆ ಗುರಿಯಾಗಿರುವ ನಟ ಸಂಜಯ್ದತ್ಗೆ ಕ್ಷಮೆ ನೀಡುವಂತೆ ಭಾರತೀಯ ಪತ್ರಿಕಾ ಮಂಡಳಿ (ಪಿಸಿಐ) ಅಧ್ಯಕ್ಷ ನ್ಯಾ.ಮಾರ್ಕಂಡೇಯ ಕಾಟ್ಜು ಒತ್ತಾಯಿಸಿದ್ದರು. ಈಗ ಇದೇ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ 70 ವರ್ಷದ ಜೈಬುನ್ನೀಸಾ ಪರವಾಗಿಯೂ ಅವರು ದನಿಯೆತ್ತಿದ್ದಾರೆ. ಆಕೆಗೂ ಕ್ಷಮಾದಾನ ನೀಡುವಂತೆ ಮಹಾರಾಷ್ಟ್ರ ರಾಜ್ಯಪಾಲ ಕೆ.ಶಂಕರನಾರಾಯಣನ್ ಮತ್ತು ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ಗುರುವಾರ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ.
ಮಾನವೀಯತೆ ಮತ್ತು ವೈದ್ಯಕೀಯ ಪರಿಸ್ಥಿತಿ ಆಧಾರದಲ್ಲಿ ಜೈಬುನ್ನೀಸಾಗೆ ಶಿಕ್ಷೆಯಿಂದ ವಿನಾಯಿತಿ ನೀಡಬೇಕೆಂದು ಕಾಟ್ಜು ಪ್ರತಿಪಾದಿಸಿದ್ದಾರೆ. ಆಕೆ ವಿರುದ್ಧದ ಆರೋಪಗಳ ಸಮಗ್ರ ಅಧ್ಯಯನದ ಬಳಿಕ ತಾವು ಈ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ.
ಆಕ್ರೋಶ: ಸಂಜಯದತ್ಗೆ ಕ್ಷಮಾದಾನ ನೀಡುವಂತೆ ಬಾಲಿವುಡ್ ನಟ ನಟಿಯರು, ಕೆಲ ರಾಜಕೀಯ ಪಕ್ಷಗಳ ಮುಖಂಡರು ವಾದಿಸಿದ್ದರು. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಜೈಬುನ್ನೀಸಾ ಪುತ್ರಿ ತಾನೂ ಪ್ರಭಾವಶಾಲಿ ವ್ಯಕ್ತಿಯಾಗಿರುತ್ತಿದ್ದರೆ ಬೆಂಬಲ ವ್ಯಕ್ತವಾಗುತ್ತಿತ್ತು ಎಂದು ಕಿಡಿಕಾರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.