ಸೂರ್ಯನೆಲ್ಲಿ: ಕುರಿಯನ್ಗೆ ಹಿನ್ನಡೆ
ಇಡುಕ್ಕಿ(ಕೇರಳ): ಸೂರ್ಯನೆಲ್ಲಿ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯಸಭಾ ಉಪ ಸಭಾಪತಿ ಪಿ.ಜೆ. ಕುರಿಯನ್ ಅವರಿಗೆ ಹಿನ್ನಡೆಯಾಗಿದೆ. ಅತ್ಯಾಚಾರಕ್ಕೊಳಗಾದ ಯುವತಿ ಸಲ್ಲಿಸಿದ ಕ್ರಿಮಿನಲ್ ಮರುಪರಿಶೀಲನಾ ಅರ್ಜಿಗೆ ಸಂಬಂಧಿಸಿ ಸ್ಥಳೀಯ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.
ಥೋಡುಪುಝಾ ಸೆಷನ್ಸ್ ನ್ಯಾಯಾಲಯವು ಯುವತಿಯ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿದ್ದು, ಪ್ರಕರಣದ ಪ್ರಮುಖ ಆರೋಪಿ ಧರ್ಮರಾಜನ್, ಜಮಾಲ್, ಉನ್ನಿಕೃಷ್ಣನ್ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ. ಈ ಸಂಬಂಧ ಮುಂದಿನ ವಿಚಾರಣೆಯನ್ನು ಮೇ 29ಕ್ಕೆ ನಿಗದಿಪಡಿಸಿದೆ.
ತಿರುವಂನಂತಪುರ ಜೈಲಿನಲ್ಲಿರುವ ಧರ್ಮರಾಜನ್ ಪೂಜಾಪುರನನ್ನು ಆ ದಿನ ಹಾಜರುಪಡಿಸುವಂತೆ ನ್ಯಾಯಾಲಯ ಸೂಚಿಸಿದೆ.
ಪ್ರಕರಣದಲ್ಲಿ ಕುರಿಯನ್ ಅವರ ಪಾತ್ರದ ಕುರಿತು ಮತ್ತಷ್ಟು ತನಿಖೆಗೆ ಆಗ್ರಹಿಸಿ ಸಲ್ಲಿಸಿದ್ದ ಈ ಹಿಂದಿನ ಅರ್ಜಿ ತಿರಸ್ಕೃತಗೊಂಡಿತ್ತು. ಅದನ್ನು ಪ್ರಶ್ನಿಸಿ ಯುವತಿಯು ಈ ಅರ್ಜಿ ಸಲ್ಲಿಸಿದ್ದಾಳೆ. ನ್ಯಾಯಾಲಯವು ಅರ್ಜಿ ವಿಚಾರಣೆಗೆ ಸ್ವೀಕರಿಸಿದ್ದರಿಂದ ಕುರಿಯನ್ ಅವರಿಗೆ ಹಿನ್ನಡೆಯಾದಂತಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.