ಜೊಹಾನ್ಸ್ಬರ್ಗ್: ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿರುವ ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ನೆಲ್ಸನ್ ಮಂಡೇಲಾರನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಉಸಿರಾಟದ ತೊಂದರೆ ಎದುರಿಸುತ್ತಿದ್ದ ಮಂಡೇಲಾರನ್ನು ಬುಧವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಡೇಲಾ ಅವರು ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗುತ್ತಿರುವುದು 4 ತಿಂಗಳಲ್ಲಿ ಇದು ಮೂರನೇ ಬಾರಿಯಾಗಿದೆ.