ಮುಂಬೈ: ಅಪರಿಚಿತ ದುಷ್ಕರ್ಮಿಗಳ ಲೈಂಗಿಕ ಹಲ್ಲೆಯಿಂದ ಮಗಳನ್ನು ರಕ್ಷಿಸಲು ಹೋದ ತಾಯಿಯ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿರುವ ಘಟನೆ ಇಲ್ಲಿ ನಡೆದಿದೆ.
ಇಬ್ಬರು ಮಹಿಳೆಯರು ಸೇರಿದಂತೆ ಕೆಲ ಅಪರಿಚಿತರು ತಾಯಿಯ ಮೇಲೆ ಭಾರಿ ಹಲ್ಲೆ ನಡೆಸಿದ್ದಾರೆ. ಬಳಿಕ ಆಕೆಗೆ ಬೆಂಕಿ ಹಚ್ಚಲಾಗಿದೆ. ಶೇ. 90 ರಷ್ಟು ಸುಟ್ಟ ಗಾಯಗಳಾಗಿವೆ ಎಂದು ಪೊಲೀಸರು ಹೇಳಿದ್ದಾರೆ. ಈಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾಳೆ ಎಂದಿದ್ದಾರೆ. ಘಟನೆಗೆ ಸ್ಥಳೀಯ ಕಾಂಗ್ರೆಸ್ ಪುಢಾರಿಯೊಬ್ಬ ಕಾರಣ ಎಂದು ತಾಯಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ. ಸುಟ್ಟ ಗಾಯಗಳಿಂದ ನರಳುತ್ತಿದ್ದ ಇವರನ್ನು ಸ್ಥಳೀಯರೇ ಸೇರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.