ನವದೆಹಲಿ: ವಿವಾದಿತ ಮಹಿಳಾ ಮೀಸಲಾತಿ ಮಸೂದೆ ಮತ್ತೊಮ್ಮೆ ಸಂಸತ್ತಿನ ಮುಂದಿಡಲು ಯುಪಿಎ ಸರ್ಕಾರ ಚಿಂತನೆ ನಡೆಸಿದೆ. ಈ ಮೂಲಕ ಯುಪಿಎಗೆ ನೀಡಿರುವ ಬೆಂಬಲ ಹಿಂತೆಗೆದುಕೊಳ್ಳುವ ಬೆದರಿಕೆ ಹಾಕಿರುವ ಸಮಾಜವಾದಿ ಪಕ್ಷಕ್ಕೆ ಮತ್ತೊಮ್ಮೆ ಸರ್ಕಾರ ಸವಾಲು ಹಾಕುವ ಕೆಲಸ ಮಾಡಲಿದೆ.
ರಾಜ್ಯಸಭೆಯಲ್ಲಿ ಈ ಮಸೂದೆಗೆ ಈಗಾಗಲೇ ಅನುಮತಿ ಸಿಕ್ಕಿದೆ. ಆದರೆ, ಲೋಕಸಭೆಯಲ್ಲಿ ಸಮಾಜವಾದಿ ಪಕ್ಷ ಮತ್ತು ಆರ್‌ಜೆಡಿಯಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.