ನವದೆಹಲಿ: ಶ್ರೀಲಂಕಾ ವಿರುದ್ಧ ತಮಿಳುನಾಡು ವಿಧಾನಸಭೆ ತೆಗೆದುಕೊಂಡ ನಿರ್ಣಯವನ್ನು ವಿದೇಶಾಂಗ ಸಚಿವ ಸಲ್ಮಾನ್ ಖುರ್ಷಿದ್ ತಿರಸ್ಕರಿಸಿದ್ದಾರೆ. ಸರ್ಕಾರ ತಮಿಳರ ಭಾವನೆಗಳನ್ನು ಅರ್ಥ ಮಾಡಿಕೊಳ್ಳುತ್ತದೆ. ಆದರೆ, ಪ್ರತ್ಯೇಕ ತಮಿಳು ಈಳಂ ಸ್ಥಾಪಿಸಬೇಕು ಹಾಗೂ ಶ್ರೀಲಂಕಾವನ್ನು ಮಿತ್ರ ರಾಷ್ಟ್ರವನ್ನಾಗಿ ಪರಿಗಣಿಸಬಾರದು ಎನ್ನುವ ಬೇಡಿಕೆಯನ್ನು ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳಲಾಗದು ಎಂದು ಖುರ್ಷಿದ್ ತಿಳಿಸಿದ್ದಾರೆ.