ಸಾಂದರ್ಭಿಕ ಚಿತ್ರ 
ದೇಶ

ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ ಯತ್ನ

ನಗರದಲ್ಲಿ ಕಾಮುಕರ ಅಟ್ಟಹಾಸ ಮುಂದುವರಿದಿದ್ದು...

ಬೆಂಗಳೂರು: ನಗರದಲ್ಲಿ ಕಾಮುಕರ ಅಟ್ಟಹಾಸ ಮುಂದುವರಿದಿದ್ದು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಪುಟ್ಟ ಕಂದಮ್ಮಗಳ ಮೇಲೆ ದುರುಳರು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಆರೋಪಿಗಳನ್ನು ಹಿಡಿದ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿ ಪೊಲೀಸ್ ವಶಕ್ಕೆ ಒಪ್ಪಿಸಿದ್ದಾರೆ.

ಕೆ.ಪಿ.ಅಗ್ರಾಹಾರ ಚೆಲುವಪ್ಪ ಗಾರ್ಡನ್‌ನಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಎರಡೂವರೆ ವರ್ಷದ ಬಾಲಕಿಯನ್ನು ಅಹರಿಸಿ, ಅತ್ಯಾಚಾರಕ್ಕೆ ಯತ್ನಿಸಿದ ರಾಮಕೃಷ್ಣ (25) ಎಂಬಾತನಿಗೆ ಹಿಗ್ಗಾ ಮುಗ್ಗಾ ಥಳಿಸಿದ ಸ್ಥಳೀಯರು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಬಾಲಕಿಗೆ ಚಾಕಲೇಟ್ ಕೊಡಿಸುವ ಆಮಿಷ ಒಡ್ಡಿದ ಆರೋಪಿ, ಸಮೀಪದ ಮಹದೇಶ್ವರ ದೇವಸ್ಥಾನ ಹಿಂಭಾಗ ರೈಲ್ವೆ ಹಳಿ ಬಳಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮಗು ಅಳುತ್ತಿರುವುದನ್ನು ಗಮನಿಸಿದ ದಾರಿಹೋಕರು ಏನಾಗುತ್ತಿದೆ ಎಂದು ನೋಡಲು ಬಂದಿದ್ದಾರೆ. ಆಗ ರಾಮಕೃಷ್ಣ ಪರಾರಿಯಾಗಲು ಯತ್ನಿಸಿದ್ದಾನೆ. ಆತನ ಬೆನ್ನಟ್ಟಿದ್ದ ಜನರು ಥಳಿಸಿ ಪೊಲೀಸರ ವಷಕ್ಕೆ ನೀಡಿದರು.

ಚೆಲುವಪ್ಪ ಗಾರ್ಡನ್‌ನಲ್ಲೇ ವಾಸವಿದ್ದ ಆರೋಪಿ ಕೂಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪಾಲಕರು ನೀಡಿದ ದೂರಿನ ಅನ್ಯಯ ಪೋಕ್ಸೋ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಕೆ.ಪಿ.ಅಗ್ರಹಾರ ಪೊಲೀಸರು ತಿಳಿಸಿದ್ದಾರೆ.

ಇನ್ನೊಂದು ಘಟನೆಯಲ್ಲಿ ಬೊಮ್ಮನಹಳ್ಳಿ ಸಮೀಪದ ಮಂಗಮ್ಮನಪಾಳ್ಯದಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾರು ಚಾಲಕ ಸಾದಿಕ್ (27) ಎಂಬಾತನಿಕೆ ಸಾರ್ವಜನಿಕರು ಥಳಿಸಿದ್ದಾರೆ.

ಭಾನುವಾರ ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ. ಬಾಲಕಿ ಕೂಗಾಡಿದಾಗ ಸ್ಥಳೀಯರು ಆಗಮಿಸಿ ಸಾದಿಕ್‌ನನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಬೊಮ್ಮನಹಳ್ಳಿ ಉಪ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಲೋ ಕಾಯ್ದೆ ಅನ್ಯಯ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT