ಸಾಂದರ್ಭಿಕ ಚಿತ್ರ 
ದೇಶ

ಶಾಲೆ ಗುಮಾಸ್ತನೂ ಕೀಚಕ!

ಖಾಸಗಿ ಶಾಲೆಯೊಂದರಲ್ಲಿ ನರ್ಸರಿ ವ್ಯಾಸಾಂಗ ಮಾಡುತ್ತಿರುವ...

ಚಾಕೊಲೆಟ್ ಕೊಡಿಸುವ ನೆಪದಲ್ಲಿ ಕೃತ್ಯ

ಬೆಂಗಳೂರು:
ಖಾಸಗಿ ಶಾಲೆಯೊಂದರಲ್ಲಿ ನರ್ಸರಿ ವ್ಯಾಸಾಂಗ ಮಾಡುತ್ತಿರುವ ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವ ಮತ್ತೊಂದು ಘಟನೆ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಶಾಲಾ ಗುಮಾಸ್ತನೇ ಈ ಅಮಾನುಷ ಕೃತ್ಯವೆಸಗಿದ್ದು, ಆರೋಪಿ ನಾಗರಾಜ್ (27)ನನ್ನು ಪೊಲೀಸರು ಬಂಧಿಸಿದ್ದಾರೆ.

ಚಾಕಲೇಟ್ ಕೊಡಿಸುವ ನೆಪದಲ್ಲಿ ಬಾಲಕಿಯನ್ನು ಕರೆದುಕೊಂಡು ಹೋಗಿ ಆರೋಪಿ ಎರಡು ಬಾರಿ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಆಕೆಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಅತ್ಯಾಚಾರ ಎಸಗಿರುವುದು ವೈದ್ಯಕೀಯ ವರದಿಯಿಂದ ಸಾಬೀತಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಘಟನೆಯ ವಿವರ

ಹಳೆ ಮದ್ರಾಸ್ ರಸ್ತೆಯಲ್ಲಿರುವ ಖಾಸಗಿ ಶಾಲೆಯೊಂದರಲ್ಲಿ ಬಾಲಕಿ ವ್ಯಾಸಾಂಗ ಮಾಡುತ್ತಿದ್ದು ಆರೋಪಿ ನಾಗರಾಜ್ ನ.26ರಂದು ಚಾಕಲೇಟ್ ಕೊಡಿಸುವ ನೆಪದಲ್ಲಿ ಆಕೆಯನ್ನು ಶೌಚಾಲಯಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ.

ನಂತರ ಶಾಲೆಗೆ ಹೋಗಲು ಬಾಲಕಿ ನಿರಾಕರಿಸಿದ್ದಲ್ಲದೆ ಆಕೆಯ ಆರೋಗ್ಯದಲ್ಲಿ ಏರುಪೇರಾಗಿತ್ತು. ಈ ಘಟನೆಯ ನಂತರ ಬಾಲಕಿಯ ನಡವಳಿಕೆಯಲ್ಲಿ ಬದಲಾವಣೆ ಕಂಡುಬಂದಿತ್ತು. ಇದನ್ನು ಗಮನಿಸಿದ ತಾಯಿ ನ.28ರಂದು ವಿಚಾರಿಸಿದಾಗ ನಾಗರಾಜಣ್ಣ ಚಾಕಲೇಟ್ ಕೊಡುವುದಾಗಿ ಕರೆದುಕೊಂಡು ಹೋಗಿದ್ದ ಎಂದ ಆಕೆ, ನಡೆದ ವಿಷಯವನ್ನು ತಿಳಿಸಿದ್ದಾಳೆ.

ಪೋಷಕರು ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು ಪರಿಶೀಲಿಸಿದಾಗ ಅತ್ಯಾಚಾರಕ್ಕೊಳಗಾಗಿರುವುದು ತಿಳಿದುಬಂದಿದೆ.

ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ದಾಖಲಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಅವರ ಸಲಹೆಯಂತೆ ನಗರದ ಅಂಬೇಡ್ಕರ್ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೊಳಪಡಿಸಿದಾಗ ಎರಡು ಬಾರಿ ಅತ್ಯಾಚಾರ ನಡೆದಿರುವುದನ್ನು ವೈದ್ಯರು ಖಚಿತಪಡಿಸಿದ್ದಾರೆ.

ಇದರಿಂದ ಗಾಬರಿಗೊಂಡ ಪೋಷಕರು ಪೂರ್ವ ವಿಭಾಗ ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಬಾಲಕಿಯ ಹೇಳಿಕೆ ಆಧಾರದ ಮೇಲೆ ನ.30ರಂದು ಶಾಲಾ ಗುಮಾಸ್ತ ನಾಗರಾಜ್‌ನನ್ನು ಬಂಧಿಸಿದ್ದಾರೆ.

ವಿದ್ಯಾರ್ಥಿನಿಯ ಹೇಳಿಕೆ ಆಧರಿಸಿ ಪೋಕ್ಸೋ ಕಾಯ್ದೆಯಡಿ ಶಾಲಾ ಗುಮಾಸ್ತ ನಾಗರಾಜ್‌ನನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ. ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಶಾಲಾ ಆಡಳಿತ ಮಂಡಳಿಯಿಂದಲೂ ಮಾಹಿತಿ ಕಲೆಹಾಕಲಾಗುತ್ತಿದೆ.

ಅಲೋಕ್‌ಕುಮಾರ್
ಹೆಚ್ಚುವರಿ ಪೊಲೀಸ್ ಆಯುಕ್ತ, ಕಾನೂನು ಮತ್ತು ಸುವ್ಯವಸ್ಥೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚಿಕ್ಕಪೇಟೆ ಮಾಜಿ ಶಾಸಕ ಆರ್ ವಿ ದೇವರಾಜ್ ನಿಧನ

ಎಲ್ಲಾ ಹೊಸ ಸ್ಮಾರ್ಟ್‌ಫೋನ್‌ಗಳಲ್ಲಿ 'ಸಂಚಾರ್ ಸಾಥಿ' ಆ್ಯಪ್ ಕಡ್ಡಾಯ: ಕೇಂದ್ರ ಆದೇಶ

ಇ-ಸ್ಟ್ಯಾಂಪ್‌ ಹೋಯ್ತು.. 'ಡಿಜಿಟಲ್ ಇ-ಸ್ಟ್ಯಾಂಪ್‌' ಬಂತು... ಕರ್ನಾಟಕದಲ್ಲಿ ಮಹತ್ವದ ಬದಲಾವಣೆ! ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

ಬಸವ ತತ್ವದ ಕೆಲ ಸ್ವಾಮೀಜಿಗಳು ತಾಲಿಬಾನಿಗಳಿದ್ದಂತೆ: ಕಾಡಸಿದ್ದೇಶ್ವರ ಸ್ವಾಮೀಜಿ ಮತ್ತೊಂದು ವಿವಾದಾತ್ಮಕ ಹೇಳಿಕೆ!

HR88B8888 ಭಾರತದ ಅತ್ಯಂತ ದುಬಾರಿ ಕಾರು ನೋಂದಣಿ ಸಂಖ್ಯೆ ಮರು ಹರಾಜಿಗೆ..! ಕಾರಣ ಏನು ಗೊತ್ತಾ?

SCROLL FOR NEXT