ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ (ಸಂಗ್ರಹ ಚಿತ್ರ) 
ದೇಶ

'ಮೋದಿ ತಮಗಾಗಿ ಅಧಿಕಾರ ಬಯಸಿದ್ದರು, ನಾನು ಜನತೆಗಾಗಿ ಬಯಸಿದ್ದೆ'

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಮತ್ತೆ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದು, ಮೋದಿ ತಮಗಾಗಿ ಅಧಿಕಾರ ಬಯಸಿದ್ದರು ಎಂದು ಹೇಳಿದ್ದಾರೆ.

ಅಮೇಥಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಮತ್ತೆ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದು, ಮೋದಿ ತಮಗಾಗಿ ಅಧಿಕಾರ ಬಯಸಿದ್ದರು ಎಂದು ಹೇಳಿದ್ದಾರೆ.

ಗುರುವಾರ ತಮ್ಮ ಸ್ವಕ್ಷೇತ್ರ ಅಮೇಥಿಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿ ಅವರು, ಕೇಂದ್ರ ಎನ್‌ಡಿಎ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದರು. 'ನರೇಂದ್ರ ಮೋದಿ ಅವರು ವಿಭಿನ್ನವಾಗಿ ಚಿಂತಿಸುವ ಮತ್ತು ಸರ್ವಾಧಿಕಾರ ಹೊಂದಬಯಸುವ ವ್ಯಕ್ತಿಯಾಗಿದ್ದಾರೆ' ಎಂದು ರಾಹುಲ್ ಹೇಳಿದ್ದಾರೆ.

'ಕಾಂಗ್ರೆಸ್ ಪಕ್ಷ ಸರ್ವರಿಗೂ ಅಧಿಕಾರ ಕೊಡುವ ಮೂಲಕ ಅವರ ಅಭಿವೃದ್ಧಿ ಬಯಸಿದ್ದು, ಆ ಮೂಲಕ ವಿಶ್ವವೇ ಅವರ ಕೂಗನ್ನು ಅಲಿಸಬೇಕು ಎಂಬುದು ನಮ್ಮ ಆಶಯವಾಗಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ನಮಗಿಂತಲೂ ವಿಭನ್ನವಾಗಿದ್ದು, ಇಡೀ ದೇಶದ ಆಡಳಿತ ತಮ್ಮೊಬ್ಬರ ಕೈಯಲ್ಲಿ ಮಾತ್ರ ಇರಬೇಕು ಎನ್ನುವ ಸರ್ವಾಧಿಕಾರಿ ಧೋರಣೆ ಹೊಂದಿದ್ದಾರೆ. ದೆಹಲಿಯಲ್ಲಿರುವ ಅಧಿಕಾರಿಗಳ ಮುಖಾಂತರವೇ ಇಡೀ ದೇಶದ ವಿದ್ಯಮಾನಗಳು ನಡೆಯಬೇಕು ಎಂದು ಬಯಸುತ್ತಾರೆ' ಎಂದು ರಾಹುಲ್ ಗಾಂಧಿ ಹೇಳಿದರು.

'ಕಾಂಗ್ರೆಸ್ ಪಕ್ಷ ಸರ್ಕಾರವನ್ನು ಸಾರ್ವಜನಿಕರು ಕೂಡ ಪ್ರಶ್ನಿಸಬಲ್ಲ ನರೇಗಾ ಯೋಜನೆ, ಮಾಹಿತಿ ಹಕ್ಕು ಕಾಯ್ದೆ, ಆಹಾರ ಭದ್ರತಾ ಯೋಜನೆಗಳಂತಹ ಹಲವು ಜನ ಸ್ನೇಹಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಪ್ರಸ್ತುತ ಅಧಿಕಾರದಲ್ಲಿರುವ ಎನ್‌ಡಿಎ ಸರ್ಕಾರ ಇಂತಹ ಯಾವ ಯೋಜನೆಗಳನ್ನು ಜಾರಿಗೊಳಿಸಿದೆ ಹೇಳಿ' ಎಂದು ರಾಹುಲ್ ಪ್ರಶ್ನಿಸಿದರು.

ನಿನ್ನೆ ಕೂಡ ಪ್ರಧಾನಿ ಮೋದಿ ವಿರುದ್ಧ ಪರೋಕ್ಷ ಟೀಕೆ ಮಾಡಿದ್ದ ರಾಹುಲ್ ಗಾಂಧಿ ಅವರು, ಜಗದೀಶ್ ಪುರಕ್ಕೆ ತೆರಳಿದ್ದಾಗ ನರೇಂದ್ರ ಮೋದಿ ಅವರ ಆದರ್ಶ ಗ್ರಾಮ ಯೋಜನೆಯನ್ನು ಅನಗತ್ಯ ಯೋಜನೆ ಎಂದು ಟೀಕಿಸಿದ್ದರು. 'ನನ್ನ ಸ್ವಕ್ಷೇತ್ರ ಅಮೇಥಿಯಲ್ಲಿ ಸುಮಾರು 600 ಗ್ರಾಮಗಳಿದ್ದು, ನನಗೆ ಕೇವಲ ಒಂದು ಗ್ರಾಮವನ್ನು ಮಾತ್ರ ಆರಿಸಿಕೊಳ್ಳುಂತೆ ಹೇಳುತ್ತಾರೆ. ಆದರೆ ನನ್ನ ಯೋಚನಾ ಲಹರಿಯೇ ಬೇರೆಯಾಗಿದ್ದು, ಅಮೇಥಿಯಲ್ಲಿರುವ ಸಮಗ್ರ ಗ್ರಾಮಗಳನ್ನು ಅಭಿವೃದ್ಧಿಗೊಳಿಸಬೇಕು' ಎಂದು ರಾಹುಲ್ ಹೇಳಿದರು.

ಒಟ್ಟಾರೆ ಲೋಕಸಭಾ ಚುನಾವಣೆಯ ಸೋಲಿನ ಬಳಿಕ ಕೆಲಕಾಲ ನಾಪತ್ತೆಯಾಗಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು, ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸರಣಿಯಾಗಿ ಟೀಕಾ ಪ್ರಹಾರಗಳನ್ನು ಹರಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ